ಅತ್ಯಾಚಾರ: ನೊಂದ ಕುಟಂಬಕ್ಕೆ ಕೋಟಿ ರೂ.ಪರಿಹಾರ ನೀಡಿ…

467

ಸಾಗರ : ಉತ್ತರ ಪ್ರದೇಶದಲ್ಲಿ ದಲಿತ ಸಮುದಾಯಕ್ಕೆ ಸೇರಿದ ೧೯ ವರ್ಷದ ಮನಿಷಾ ವಾಲ್ಮಿಕಿ ಎಂಬ ಯುವತಿಯ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿರುವ ದುಷ್ಕರ್ಮಿ ಗಳನ್ನು ನೇಣುಗಂಭಕ್ಕೆ ಏರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕಷ್ಣಪ್ಪ ಬಣ) ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿಎಸ್‌ಎಸ್ ತಾಲ್ಲೂಕು ಸಂಚಾಲಕ ಎಸ್.ಲಕ್ಷ್ಮಣ್ ಸಾಗರ್, ಉತ್ತರ ಪ್ರದೇಶದಲ್ಲಿ ದಲಿತರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅತ್ಯಾಚಾರ ಮತ್ತು ಕೊಲೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಭಯಭೀತರಾಗಿ ಬದುಕು ಸ್ಥಿತಿ ನಿರ್ಮಾ ಣವಾಗಿದೆ ಎಂದು ದೂರಿದರು.
ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಜನಾಂಗದ ಯುವತಿ ಮನಿಷಾಳನ್ನು ಅತ್ಯಂತ ಅಮಾನುಷವಾಗಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿರುವ ಆರೋಪಿಗಳನ್ನು ಈತನಕ ಬಂಧಿಸದೆ ಇರುವ ಕ್ರಮ ಖಂಡನೀಯ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿ zರೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿದರು.
ಉತ್ತರ ಪ್ರದೇಶದ ಸಂತ್ರಸ್ತ ಮನಿಷಾ ವಾಲ್ಮೀಕಿ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ನೊಂದ ಕುಟುಂಬಕ್ಕೆ ೧ ಕೋಟಿ ರೂ. ಪರಿಹಾರ ನೀಡಬೇಕು. ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು. ದೇಶದಲ್ಲಿ ಮಹಿಳೆಯರಿಗೆ ಮತ್ತು ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಲ್.ಚಂದ್ರಪ್ಪ ಮಾತನಾಡಿ, ಉತ್ತರ ಪ್ರದೇಶಲ್ಲಿ ಮನಿಷಾ ಮೇಲೆ ನಡೆದ ಕೃತ್ಯ ಇಡೀ ಮಾನವ ಸಮಾಜ ನಾಚುವಂತೆ ಮಾಡಿದೆ. ದೇಶದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಜಸ್ತಿಯಾಗುತ್ತಿದೆ. ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದರು.
ಪ್ರತಿಭಟನೆಯನ್ನು ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ರಾಜೇಂದ್ರ ಬಂದಗz, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ವಿ.ಹಿತಕರ ಜೈನ್, ನಗರಸಭೆ ಮಾಜಿ ಸದಸ್ಯ ರವಿ ಜಂಬಗಾರು, ಧರ್ಮರಾಜ್ ಇನ್ನಿತರರು ಮಾತನಾಡಿದರು.
ಈ ಸಂದರ್ಭದಲ್ಲಿ ನಾಗರಾಜ ಸ್ವಾಮಿ, ರಂಗಪ್ಪ ಹೊನ್ನೆಸರ, ಯಶವಂತ ಪಣಿ, ರಮೇಶ್, ಮಹ್ಮದಾಲಿ, ಮುನ್ನ, ಗುತ್ಯಪ್ಪ ಕಾನ್ಲೆ, ಗಂಗರಾಜ್, ಅಬ್ಬಾಸ್ ಇನ್ನಿತರರು ಹಾಜರಿದ್ದರು.