ಅವಹೇಳನಕಾರಿ ಫೋಸ್ಟ್; ಕ್ರಮಕ್ಕೆ ಆಗ್ರಹ

517

ಶಿವಮೊಗ್ಗ: ಅಫ್ರೋಜ್ ಎಂಬ ವ್ಯಕ್ತಿಯು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದ್ದು, ಈತನನ್ನು ಕೂಡಲೇ ಬಂಧಿಸಿ, ಕಾನೂನುಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಸೈಬರ್ ಕ್ರೈಂ ಸ್ಟೇಷನ್‌ಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವರಾಜು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹೃಷಿಕೇಶ್ ಪೈ, ಬಿಜೆಪಿ ಯುವ ಮೋರ್ಚಾದ ಸುಹಾಸ್ ಶಾಸ್ತ್ರಿ ಉಪಸ್ಥಿತರಿದ್ದರು.