ಆರೋಗ್ಯ ಇಲಾಖೆಯಲ್ಲಿ ವಿವಿಧ ಹುzಗಳ ಭರ್ತಿಗೆ ಅರ್ಜಿ

492

ದಾವವಣಗೆರೆ :ಕೋವಿಡ್-೧೯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಹುzಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊರೊನಾ ವೈರಸ್ ಪ್ರಕರಣ ಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವವಂತೆ ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇವರ ಅಧೀನದಲ್ಲಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುzಗಳನ್ನು ತಾತ್ಕಾಲಿಕವಾಗಿ ೬ ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮೂಲಕ ಹುzಗಳು ಭರ್ತಿಯಾಗುವವರೆಗೆ ಇವುಗಳಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮುಖಾಂತರ ಮೆರಿಟ್ ಆಧಾರದ ಮೇಲೆ ಹುzಗಳನ್ನು ಭರ್ತಿ ಮಾಡಲಾಗುವುದು.
ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎಸ್. ಎಸ್ ಹೈಟೆಕ್ ಆಸ್ಪತ್ರೆ ಹತ್ತಿರ ರಾಮನಗರರ ರಸ್ತೆ ಎನ್.ಸಿ.ಸಿ ಕ್ಯಾಂಪ್ ಹತ್ತಿರ ದಾವಣಗೆರೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಸಂಬಂಧಪಟ್ಟ ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಜು.೨೮ರೊಳಗಾಗಿ ಅವಶ್ಯಕ ಪೂರಕ ದಾಖಲಾತಿಗಳೊಂದಿಗೆ (ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜತಿ ಪ್ರಮಾಣ ಪತ್ರ ಮೂಲ ಮತ್ತು ನಕಲು ಪತ್ರಗಳೊಂದಿಗೆ) ಅರ್ಜಿ ಸಲ್ಲಿಸಬೇಕು. ಜು.೩೦ ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ಖಾಲಿ ಇರುವ ಹುzಗಳಿಗೆ ಭರ್ತಿ ಮಾಡಲಾಗುವುದು ಎಂದು ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರ ಸ್ವಾಮಿ ತಿಳಿಸಿzರೆ.