ಆರ್ಥಿಕ ಸಂಕಷ್ಟದ ನಡುವೆಯೂ ಸಿಎಂ ಬಿಎಸ್‌ವೈರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ..

410

ಹೊನ್ನಾಳಿ: ಕೊರೊನಾ ವೈರಸ್ ಸೋಂಕಿನಿಂದಾಗಿ ಉದ್ಭವಿಸಿರುವ ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡಿzರೆ. ಇದಕ್ಕಾಗಿ ಜನತೆಯ ಪರವಾಗಿ ಅವರಿಗೆ ಹತ್ಪೂರ್ವಕ ಕತಜ್ಞತೆಗಳನ್ನು ಸಲ್ಲಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ೫೫ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಸಿಸಿ ರಸ್ತೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಬಹುತೇಕ ಎ ಗ್ರಾಮಗಳಲ್ಲಿಯೂ ರಸ್ತೆಗಳು, ಚರಂಡಿ, ಕುಡಿಯುವ ನೀರು ಪೂರೈಕೆ, ರಸ್ತೆ ಡಾಂಬರೀಕರಣ, ಸಮುದಾಯ ಭವನ-ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿಳಿಸಿದರು.
ತಾಲೂಕಿನ ಸುಂಕದಕಟ್ಟೆ ಗ್ರಾಮ ದಲ್ಲಿ ೪ ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿದೆ. ೨ ಕೋಟಿ ರೂ.ಗಳ ವೆಚ್ಚದಲ್ಲಿ ಶ್ರೀ ಮಂಜುನಾಥ ಸ್ವಾಮಿ- ಶ್ರೀ ನರಸಿಂಹಸ್ವಾಮಿ ದೇವಸ್ಥಾನದ ಸಮುದಾಯ ಭವನ ನಿರ್ಮಿಸಲಾಗಿದೆ. ರಾಜಗೋಪುರ ನಿರ್ಮಾಣ ಕಾಂಗಾರಿ ಭರದಿಂದ ಸಾಗಿದೆ. ೨ ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲಾ ಗಿದೆ. ಗ್ರಾಮದ ಹೊರವಲಯದಲ್ಲಿ ೧೦ ಕೋಟಿ ರೂ.ಗಳ ವೆಚ್ಚದಲ್ಲಿ ಐಟಿಐ ಕಾಲೇಜು ಕಟ್ಟಡ ನಿರ್ಮಿಸಲಾಗಿದೆ ಎಂದು ವಿವರಿಸಿದರು.
ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ಸದಸ್ಯೆ ಉಮಾ ರಮೇಶ್, ತಾಪಂ ಪ್ರಭಾರ ಅಧ್ಯಕ್ಷ ಕುಳಗಟ್ಟೆ ಕೆ.ಎಲ್. ರಂಗನಾಥ್, ನ್ಯಾಮತಿ ತಾಪಂ ಉಪಾಧ್ಯಕ್ಷ ಡಿ. ಮರಿಕನ್ನಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಗ್ರಾಪಂ ಮಾಜಿ ಅಧ್ಯಕ್ಷ ಡಿ. ಬಸಪ್ಪ, ಬಿಜೆಪಿ ಸುಂಕದಕಟ್ಟೆ ಗ್ರಾಮ ಘಟಕದ ಅಧ್ಯಕ್ಷ ಮಂಜಪ್ಪ, ಮುಖಂಡರಾದ ಎಸ್.ಕೆ. ನರಸಿಂಹಮೂರ್ತಿ, ಕರಿಯಪ್ಪ, ಎಸ್.ಆರ್. ಗಣೇಶ್ ಮತ್ತಿತರರಿದ್ದರು