ಇತಿಹಾಸದ ಪ್ರಮುಖ ಅಧ್ಯಾಯಗಳನ್ನು ಕೈಬಿಟ್ಟಿದ್ದಕ್ಕೆ ಖಂಡನೆ

469

ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪಠ್ಯದಿಂದ ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್, ಹೈದರಾಲಿ ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಅಧ್ಯಾಯ ಕೈಬಿಟ್ಟಿದ್ದಕ್ಕೆ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಶ್ರೀಜಿತ್ ಖಂಡಿಸಿzರೆ.
ಪಠ್ಯ ಕಡಿತಗೊಳಿಸುವ ನೆಪದಲ್ಲಿ ಶಿಕ್ಷಣ ಇಲಾಖೆಯು ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್, ಹೈದರಾಲಿ ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಅಧ್ಯಾಯವನ್ನು ಕೈಬಿಟ್ಟಿರುವುದು ಸರಿಯಲ್ಲ. ರಾಜ್ಯ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಇಂತಹ ಕೆಲಸ ಮಾಡಿzರೆ. ಎಲ್ಲ ಪಠ್ಯಗಳನ್ನು ಮತ್ತೆ ಸೇರಿಸಬೇಕು ಎಂದು ಆಗ್ರಹಿಸಿದರು.
ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್, ಹೈದರಾಲಿ ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ವಿಚಾರಗಳು ಇತಿಹಾಸದ ಭಾಗ ಆಗಿವೆ. ಪ್ರಮುಖ ವಿಚಾರಗಳನ್ನು ಅಳಿಸಿಹಾಕಲು ಸಾಧ್ಯವಿಲ್ಲ. ಪುನಃ ಎಲ್ಲ ವಿಷಯಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದಲ್ಲಿ ಸೇರಿಸಿ ಮಕ್ಕಳಿಗೆ ಇತಿಹಾಸದ ಬಗ್ಗೆ ತಿಳಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು.
ಪಠ್ಯ ತೆಗೆದುಹಾಕುವ ಮೂಲಕ ಇತಿಹಾಸ ತಿರುಚುವ ಕೆಲಸ ಆಗಬಾರದು. ಜನರ ದಿಕ್ಕು ತಪ್ಪಿಸುವ ಯತ್ನ ನಡೆಸಬಾರದು. ಕೂಡಲೇ ರಾಜ್ಯ ಸರ್ಕಾರ ಕೂಡಲೇ ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್, ಹೈದರಾಲಿ ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ಅಳವಡಿಕೆ ಕುರಿತಂತೆ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿzರೆ.