ಇನ್ನೂ ಮೂರು ದಿನ ಭಾರೀ ಮಳೆ: ಎಚ್ಚರಿಕೆ

413

ಬೆಂಗಳೂರು: ಮಹಾ ಮಳೆಗೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಸಂಭವಿಸಿದ್ದು, ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿ ನೀಡಿದೆ.
ಕರಾವಳಿ ಜಿಗಳಲ್ಲಿ ಇಂದಿನಿಂದ ಆ.೧೩ ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆ.೧೩ರವರೆಗೆ ವರುಣ ಅಬ್ಬರಿಸಲಿzನೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿzರೆ.
ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಆ. ೧೦ ರಂದು ಮಲೆನಾಡು ಜಿಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಹ ಆ. ೧೦ ರಂದು ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.