ಉದ್ಯೋಗವಿಲ್ಲದೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಸಾಮಗ್ರಿ

532

ಶಿಕಾರಿಪುರ ಲಯನ್ಸ್‍ಕ್ಲಬ್ ಮತ್ತು ಬನಸಿರಿ ಲಯನ್ಸ್ ವಿದ್ಯಾಸಂಸ್ಥೆ ವತಿಯಿಂದ ಶಿಕಾರಿಪುರ ತಾಲೂಕಿನ ಸಾಲೂರು ಮತ್ತು ಅಂಬ್ಲಿಗೊಳ್ಳ ಗ್ರಾಮದಲ್ಲಿ ಕೊರೋನ ಸೋಂಕಿನಿಂದಾಗಿ ಉದ್ಯೋಗವಿಲ್ಲದೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಸಾಮಗ್ರಿಯನ್ನು ವಿತರಿಸಲಾಯಿತು. ್ಲ ಸಾಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹಾಗೂ ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟದ ರಾಜ್ಯಾಧ್ಯಕ್ಷೆ ಕೆ.ಸಿ.ಶಾಂತಾಕುಮಾರಿ ಅವರು ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಹೆಚ್.ಜಿ. ಜಯದೇವಪ್ಪ, ಪಾಂಡುರಂಗ ಜಿ.ಶೇಟ್, ಡಿ.ಕೆ.ಮಲ್ಲಿಕಾರ್ಜುನ್, ವಸಂತಕುಮಾರ್, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.