ಉಪ ಚುನಾವಣೆ: ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲುವು: ಈಶ್ವರಪ್ಪ

497

ಬೀದರ : ರಾಜ್ಯದ ಶಿರಾ ಮತ್ತು ಆರ್‌ಆರ್ ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮಾತ್ರವಲ್ಲ, ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೇಳಲು ಬರುತ್ತಿರ ಲಿಲ್ಲ. ಆದರೆ, ಈಗ ಬಿಜೆಪಿಯೇ ಗೆಲ್ಲುವ ಕುದರೆ ಅಂತ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಅಪೇಕ್ಷಿತರ ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಎರಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿzರೆ. ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು ಹೇಳಿದರು.
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಅಳಿಸಿ ಹೋಗಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಆದರೆ, ಇದ್ದರೆ ತಾನೇ ಅಳಿಸಿ ಹೋಗುತ್ತದೆ. ಭೂತ ಕನ್ನಡಿ ಹಾಕಿ ಪಕ್ಷವನ್ನು ಹುಡುಕಬೇಕಾದ ಸ್ಥಿತಿ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ಬೆಳೆಯ ಬೇಕೆಂಬುದು ನಮ್ಮ ಅಪೇಕ್ಷೆ. ಆದರೆ, ಎರಡು ಪಕ್ಷಗಳು ಪರಸ್ಪರ ಬಡಿದಾಡುಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದ ಈಶ್ವರಪ್ಪ, ರಾಜ್ಯದಲ್ಲಿ ಕಾರ್ಯಕರ್ತರ ಸಂಘಟನೆಯಿಂದ ಪಕ್ಷ ಸದಢವಾಗಿ ಬೆಳೆಯುತ್ತಿದೆ. ಸಂಘಟನೆ ಮೇಲೆಯೇ ಮುಂದಿನ ಚುನಾವಣೆಯಲ್ಲೂ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ಹೇಳಿದರು.