ಐಟಿ ರಿಟನ್ಸ್: ಮಾ.೧೫ರವರೆಗೆ ವಿಸ್ತರಣೆ

29

ನವದೆಹಲಿ: ಐಟಿ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ಮಾ.೧೫ರವರೆಗೆ ವಿಸ್ತರಿಸಿದೆ.
ಆದಾಯ ತೆರಿಗೆ ರಿಟರ್ನ್ಸ್ ಸರಾಗವಾಗಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತು ಕೋವಿಡ್-೧೯ ಕಾರಣದಿಂದ ತೆರಿಗೆದಾರರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ ೨೦೨೧-೨೦೨೨ನೇ ಸಾಲಿನ ಮಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.
ಈ ಹಿಂದೆ ಡಿ.೩೧ರ ಗಡುವನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಆದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಸಮಸ್ಯೆಗಳ ಕುರಿತು ಹಲವು ಬಳಕೆದಾರರು ಟ್ವೀಟ್ ಗಡುವು ವಿಸ್ತರಿಸುವಂತೆ ಮನವಿ ಮಾಡಿದ್ದರು.
ಡಿ.೩೧ರ ಗಡುವು ಸಾಕಾಗುವುದಿಲ್ಲ ಎಂದು ಕೆಲವರು ಐಟಿ ಪೋರ್ಟಲ್ ಸಮಸ್ಯೆಗಳ ಸ್ಕ್ರೀನ್ ಶಾಟ್ ತೆಗೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು.

     ————————————————-
ಸುದ್ದಿ , ಜಾಹೀರಾತು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ WhatsApp : 9482482182