ಓಮಿಕ್ರಾನ್ ಆತಂಕ: ಮುಂಬೈನಲ್ಲಿ ನಿಷೇಧಾಜ್ಞೆ

96

ಮುಂಬೈ: ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಹರಡುವಿಕೆ ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಬೈ ನಗರದಲ್ಲಿ ಎರಡು ದಿನಗಳ ಕಾಲ ನಿಷೇಧಾe ಜರಿಗೊಳಿಸಲಾ ಗಿದೆ. ಇಂದು ಮತ್ತು ನಾಳೆ ಗುಂಪು ಸೇರುವುದು, ಪ್ರತಿಭಟನೆ ನಡೆಸುವುದು ಹಾಗೂ ರ್‍ಯಾಲಿಗಳನ್ನು ನಿಷೇಧಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಓಮಿಕ್ರಾನ್ ಹರಡುವಿಕೆ ತಡೆ ಮತ್ತು ಅಮರಾವತಿ ಮಾಲೆಗಾಂವ್ ಹಾಗೂ ನಾಂದೇಡ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಪರಿಣಾಮ ನಗರದಲ್ಲಿ ಶಾಂತಿ-ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ (ಕಾರ್ಯಾಚರಣೆ) ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.


ನಿಷೇಧಾe ಉಲ್ಲಂಘಿಸಿದರೆ ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮ರಡಿ ಶಿಕ್ಷೆಗೆ ಗುರಿಪಡಿಸಲಾಗು ವುದು ಎಂಬ ಎಚ್ಚರಿಕೆ ನೀಡಲಾಗಿದೆ.
ತ್ರಿಪುರಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಮುಸ್ಲಿಂ ಸಂಘಟನೆಗಳು ಅಮರಾವತಿಯಲ್ಲಿ ಪ್ರತಿಭಟನೆ ನಡೆಸಿದ್ದವು. ಈ ಸಮಯ ದಲ್ಲಿ ಕಲ್ಲು ತೂರಾಟ ಹಾಗೂ ಹಿಂಸಾಚಾರ ನಡೆದಿತ್ತು. ನಾಂದೇಡ್, ಮಾಲೆಂಗಾವ್, ವಾಷಿಮ್ ಮತ್ತು ಯಾವತ್ನಾಲ್ ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆದಿದ್ದವು. ಇದನ್ನು ಖಂಡಿಸಿ ಬಿಜೆಪಿ ಬಂದ್‌ಗೆ ಕರೆ ನೀಡಿತ್ತು.
ಈ ವೇಳೆ ಕಲ್ಲು ತೂರಾಟ ಮತ್ತಿತರ ಘಟನೆಗಳು ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ನಾಲ್ಕು ದಿನಗಳ ಕಾಲ ಕರ್ಫ್ಯೂ ವಿಧಿಸಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮುಂಬೈ ನಗರದಲ್ಲಿ ನಿಷೇಧಾe ಜರಿಗೊಳಿಸಲಾಗಿದೆ.

————————————————-
ಸುದ್ದಿ , ಜಾಹೀರಾತು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ WhatsApp : 9482482182
email: hosanavika@gmail.com
website : hosanavika.in
hosanavika.com