ಕನಿಷ್ಟ ವೇತನ ನೀಡದ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿ: ಡಿಸಿ

473

ಶಿವಮೊಗ್ಗ: ಪೌರ ಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನ ನೀಡದೆ ವಂಚಿಸುವ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಸಫಾಯಿ ಕರ್ಮಚಾರಿಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕನಿಷ್ಟ ವೇತನ ನೀಡದಿರುವ ಕುರಿತು ದೂರುಗಳು ಬಂದಿರುವ ತಾಲೂಕುಗಳಲ್ಲಿ ಪರಿಶೀಲನೆ ನಡೆಸಿ, ದೂರುಗಳು ಸತ್ಯವಾಗಿದ್ದರೆ ಅಂತಹ ಹೊರಗುತ್ತಿಗೆ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಕ್ರಮ ಜರುಗಿಸುವಂತೆ ಜಿ ಕಾರ್ಮಿಕ ಕಲ್ಯಾಣ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಕಾರ್ಮಿಕರ ಹಿಂದಿನ ತಿಂಗಳ ಇಪಿಎಫ್ ಪಾವತಿಸಿರುವ ಕುರಿತಾದ ದಾಖಲೆಗಳನ್ನು ಸಲ್ಲಿಸಿದ ಬಳಿಕ ಮಾತ್ರ ಗುತ್ತಿಗೆ ಸಂಸ್ಥೆಗಳಿಗೆ ವೇತನ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಎ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಬೇಕು. ಎ ಸ್ಥಳೀಯ ಸಂಸ್ಥೆಗಳಲ್ಲಿ ಈ ಯಂತ್ರ ಗಳು ಉತ್ತಮ ಸ್ಥಿತಿಯಲ್ಲಿರಬೇಕು. ಯಾವುದೇ ಕಾರಣಕ್ಕೂ ಸಫಾಯಿ ಕರ್ಮಚಾರಿಗಳಿಂದ ಮ್ಯಾನ್‌ಹೋಲ್ ಗಳನ್ನು ಸ್ಚಚ್ಛಗೊಳಿಸಬಾರದು ಎಂದು ಅವರು ತಾಕೀತು ಮಾಡಿದರು.
ಎಂಪಿಎಂ ಮತ್ತು ವಿಎಸ್‌ಐಎಲ್ ನಲ್ಲಿ ಈಗಲೂ ಸಿಬ್ಬಂದಿಗಳಿಂದ ಮ್ಯಾನವಲ್ ಸ್ಕ್ಯಾವೆಂಜಿಂಗ್ ಮಾಡಲಾಗುತ್ತಿದೆ ಎಂಬ ದೂರಿನ ಬಗ್ಗೆ ಪರಿಶೀಲನೆ ನಡೆಸಬೇಕು. ಸದರಿ ಸಂಸ್ಥೆಗಳು ನಗರ ಸ್ಥಳೀಯ ಸಂಸ್ಥೆಗಳಿಂದ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರದ ಸಹಾಯ ಪಡೆದಿರುವ ಬಗ್ಗೆ ಮಾಹಿತಿ ಯನ್ನು ಸಲ್ಲಿಸುವಂತೆ ಜಿಧಿಕಾರಿ ಅವರು ತಿಳಿಸಿದರು.
ಕರೋನಾ ಆರಂಭವಾದ ಬಳಿಕ ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಸಫಾಯಿ ಕರ್ಮಚಾರಿಗಳ ಪೂರ್ಣ ಪ್ರಮಾಣದ ಆರೋಗ್ಯ ತಪಾಸಣೆ ನಡೆಸಲಾಗಿಲ್ಲ. ಹಂತ ಹಂತವಾಗಿ ಬ್ಯಾಚ್ ಮಾಡಿ ಎಲ್ಲರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು. ಸುರಕ್ಷತಾ ಪರಿಕರಗಳನ್ನು ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮಚಾರಿಗಳು ಬಳಸುತ್ತಿರುವುದನ್ನು ಸಹ ಖಾತ್ರಿಪಡಿಸಬೇಕು ಎಂದರು.
ಗಹಭಾಗ್ಯ ಯೋಜನೆಯಡಿ ಎ ಪೌರಕಾರ್ಮಿಕರಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಮನೆ ಯನ್ನು ಒದಗಿಸಬೇಕಾಗಿದೆ. ಮನೆಗಳ ನಿರ್ಮಾಣ ಕುರಿತಾಗಿ ತೀರ್ಥಹಳ್ಳಿ ಸ್ಥಳೀಯ ಸಂಸ್ಥೆಯ ಪ್ರಸ್ತಾಪವನ್ನು ಆದಷ್ಟು ಬೇಗನೆ ಅಂತಿಮಗೊಳಿಸ ಬೇಕು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ೧೬೮ ಪೌರ ಕಾರ್ಮಿಕರಿಗೆ ಜಿ೨ ಮಾದರಿಯಲ್ಲಿ ಮನೆ ನಿರ್ಮಿಸಲು ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೇ ಪೂರ್ಣಗೊಳಿಸಿ ಮನೆಗಳ ನಿರ್ಮಾಣ ಕಾರ್ಯ ಕೈಗೆತ್ತಿ ಕೊಳ್ಳಬೇಕು. ಭದ್ರಾವತಿಯಲ್ಲಿ ೫ಜನ ಪೌರಕಾರ್ಮಿಕರಿಗೆ ವೈಯಕ್ತಿಕ ಮನೆಗಳನ್ನು ಮತ್ತು ೭೪ ಮಂದಿಗೆ ಜಿ೩ ಮಾದರಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನು ಸಹಾ ನಿಗದಿತ ಅವಧಿಯ ಒಳಗಾಗಿ ಪೂರ್ಣ ಗೊಳಿಸಬೇಕು ಎಂದು ಹೇಳಿದರು.
ಜಿ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು, ಜಿಪಂ ಸಿಇಓ ವೈಶಾಲಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಸಮಿತಿ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.