ಕಾರ್ಪೊರೇಷನ್- ಜಿಪಂ ಸೀಲ್‌ಡೌನ್

425

ಶಿವಮೊಗ್ಗ: ಮಹಾನಗರಪಾಲಿಕೆ ಮತ್ತು ಜಿಲ್ಲಾ ಪಂಚಾಂiiತ್ ಕಚೇರಿಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.
ಮಹಾನಗರಪಾಲಿಕೆಯ ಲೆಕ್ಕಪತ್ರ ವಿಭಾಗದ ಸಿಬ್ಬಂದಿಯೋರ್ವರಿಗೆ ಕೊರೊನಾ ಪಾಸಿಟಿವ್ ಧೃಢಪಟ್ಟ ಹಿನ್ನೆಲೆಯಲ್ಲಿ ನಗರಪಾಲಿಕೆಯನ್ನು ಜು.೨೭ರವರೆಗೆ ಸೀಲ್‌ಡೌನ್ ಮಾಡಲಾಗಿದೆ. ಹಾಗಾಗಿ ಪಾಲಿಕೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಈಗಾಗಲೇ ಇಡೀ ಪಾಲಿಕೆಯ ಆವರಣ ಮತ್ತು ಕಚೇರಿಗಳನ್ನು ಸ್ಯಾನಿಟೈಸರ್ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಅವರು, ಪಾಲಿಕೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದು ನಿಜ. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನು ಜೊತೆಗೆ ಅಧಿಕಾರಿಗಳನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅಧಿಕಾರಿಗಳು ವಾಸಿಸುವ ಏರಿಯಾ ಗಳಲ್ಲೂ ಕೂಡ ತಪಾಸಣೆ ನಡೆಸಲಾ ಗುವುದು ಎಂದ ಅವರು, ಆಯುಕ್ತರು ಕೂಡ ಹೋಂ ಕ್ವಾರಂಟೈನ್‌ಗೆ ಒಳಗಾಗುವುದು ಸೂಕ್ತ ಎಂದರು.
ಇಡೀ ಮಹಾನಗರಪಾಲಿಕೆಯನ್ನು ಸ್ಯಾನಿಟೈಸರ್ ಮಾಡಲಾಗುತ್ತದೆ. ಹಾಗಾಗಿ ಸೋಮವಾರದವರೆಗೆ ನಾಗರಿಕರು ಪಾಲಿಕೆಗೆ ಬರಬಾರದು ಮತ್ತು ಮುಂದಿನ ಸೂಚನೆ ನೀಡಿದ ಮೇಲೆ ತಮ್ಮ ಕೆಲಸಗಳನ್ನು ಮಾಡಿಕೊಳ್ಳ ಬಹುದಾಗಿದೆ ಎಂದು ಮನವಿ ಮಾಡಿಕೊಂಡರು. ನಿನ್ನೆ ಜಿಪಂ ಕಛೇರಿಯಲ್ಲಿ ಓರ್ವರಿಗೆ ಕೊರೋನಾ ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಈ ಕಛೇರಿಯನ್ನು ಸಹ ಸೀಲ್‌ಡೌನ್ ಮಾಡಲಾಗಿದೆ.