ಕಾಲೇಜಿನ ೨ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ

132

ಬೆಂಗಳೂರು: ಕಾಲೇಜ್‌ನ ೨ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ಕನ ಮನೆಯಲ್ಲಿ ವಾಸವಿದ್ದ ವಿದ್ಯಾರ್ಥಿನಿ, ಸೇಕ್ರೆಡ್ ಹಾರ್ಟ್ ಕಾಲೇಜ್‌ನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಅಕ್ಕನ ಜೊತೆ ವಿದ್ಯಾರ್ಥಿನಿ ಗಲಾಟೆ ಗಲಾಟೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ.
ಎರಡನೇ ಮಹಡಿಯಿಂದ ವಿದ್ಯಾರ್ಥಿನಿ ಬಿದ್ದಿರುವ ಪರಿಣಾಮವಾಗಿ ಕಾಲು ಹಾಗೂ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಘಟನೆಯ ಬಳಿಕ, ಕಾಲೇಜು ಆಡಳಿತ ಮಂಡಳಿ ಗಾಯಾಳು ವಿದ್ಯಾರ್ಥಿನಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಚಿಕಿತ್ಸೆ ಮುಂದುವರಿದಿದೆ.
————————————————-
ಸುದ್ದಿ , ಜಾಹೀರಾತು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ WhatsApp : 9482482182
email: hosanavika@gmail.com
website : hosanavika.in
hosanavika.com