ಕೊರೊನಾ ಮರಣ ಪ್ರಮಾಣ ತಗ್ಗಿಸಲು ದುರ್ಬಲರ ಆರೋಗ್ಯ ತಪಾಸಣೆ ಮಾಡಿ: ಡಿಸಿ

477

ದಾವಣಗೆರೆ: ಕೊರೊನಾ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಕೇವಲ ಕಂಟೈನ್‌ಮೆಂಟ್ ಮತ್ತು ಬಫರ್ ವಲಯಗಳು ಮಾತ್ರವಲ್ಲದೇ ಆರೋಗ್ಯ ಇಲಾಖೆಗೆ ಮಾಹಿತಿ ಇರುವ ದುರ್ಬಲ ವರ್ಗ ಎಂದು ಪರಿಗಣಿಸಲಾಗುವ ಶುಗರ್, ಬಿಪಿ, ಟಿಬಿ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ರೋಗಗಳನ್ನು ಹೊಂದಿರು ವವರನ್ನು ಪರೀಕ್ಷೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಿ ಸಾವಿನ ಸಂಭವದಿಂದ ಅವರನ್ನು ಪಾರು ಮಾಡಬೇಕೆಂದು ಡಿಸಿ ಮಹಾಂತೇಶ ಬೀಳಗಿ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕೊರೊನಾದಿಂದ ಉಂಟಾಗುವ ಮರಣ ತಗ್ಗಿಸಲು ದುರ್ಬಲ ವರ್ಗದವರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಜಿಯಾದ್ಯಂತ ಒಂದು ವಾರದೊಳಗೆ ಅವರ ಮನೆ ಮನೆಗೆ ತೆರಳಿ ಸರ್ವೇ ಮಾಡಿ, ಅವರ ಆರೋಗ್ಯ ಕುರಿತು ಮಾಹಿತಿ ಪಡೆದು ಸೂಕ್ತ ಸಲಹೆ ನೀಡುವ ಮೂಲಕ ನಿಗಾದಲ್ಲಿ ಇಡಬೇಕು. ಇಂತಹವರಿಗೆ ಕೊರೊನಾ ಸೋಂಕು ತಗುಲಿದರೆ ಅವರ ಜೀವ ಉಳಿಸುವುದು ಕಷ್ಟಸಾಧ್ಯ ವಾಗುವ ಹಿನ್ನೆಲೆಯಲ್ಲಿ ಈ ವಿಷಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸೂಚನೆ ನೀಡಿದರು. ಆರ್‌ಸಿಹೆಚ್‌ಓ ಡಾ. ಮೀನಾಕ್ಷಿ ಮಾತನಾಡಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್‌ನಿಂದ ಗರ್ಭಿಣಿಯರ ದಾಖಲಾತಿ ಕಡಿಮೆ ಆಗಿದೆ. ಏಪ್ರಿಲ್ ನಿಂದ ಇಲ್ಲಿಯವರೆಗೆ ಒಟ್ಟು ೧೫ ತಾಯಿಂದಿರ ಮರಣ ಸಂಭವಿಸಿದ್ದು , ೩ ಜನರು ಬೇರೆ ಜಿಗೆ ಸೇರಿದವರಾಗಿ zರೆ. ೭೭ ಶಿಶು ಮರಣ ಸಂಭವಿಸಿದ್ದು, ೪೧ ಹೊರ ಜಿಯದಾಗಿದ್ದರೆ ೩೬ ನಮ್ಮ ಜಿಗೆ ಸೇರಿವೆ. ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮದಡಿ ಜಿ ಯಲ್ಲಿ ೧೭೨೩ ಅಂಗನವಾಡಿಗಳ ಪೈಕಿ ಜೂನ್ ಮಾಹೆಯಲ್ಲಿ ಒಂದು ವಾರ ವಿಶೇಷ ಆಂದೋಲನ ಮಾಡಿ ೭೭೮ ಅಂಗನವಾಡಿಗಳ ಸುಮಾರು ೪೬ ಸಾವಿರ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ನಟರಾಜ್ ಮಾತನಾಡಿ, ಜಿಯಲ್ಲಿ ಜನವರಿಯಿಂದ ಜೂನ್ ಮಾಹೆವರೆಗೆ ೨ ಮಲೇರಿಯಾ, ೯೨ ಡೆಂಗ್ಯೂ, ೨೨ ಚಿಕುನುಗುನ್ಯ ಪ್ರಕರಣಗಳು ದೃದಢಪಟ್ಟಿವೆ. ಈ ಸೋಂಕುಗಳನ್ನು ನಿಗ್ರಹಿಸಲು ಲಾರ್ವಾ ಸಮೀಕ್ಷೆಯಡಿ ಮನೆ ಮನೆ ಸರ್ವೇ ಮಾಡಲಾಗಿದೆ. ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಸ್ವಚ್ಚ ಪರಿಸರದಿಂದ ಆರೋಗ್ಯವಂತ ಜೀವನ ಎಂಬ ಧ್ಯೇಯದೊಂದಿಗೆ ಅನೇಕ ಜಗೃತಿ ಕಾರ್ಯಕ್ರಮಗಳನ್ನು ಗ್ರಾಮ, ತಾಲ್ಲೂಕು ಜಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಜೊತೆಗೆ ಗ್ರಾಮ/ನಗರ/ಪಟ್ಟಣಗಳಲ್ಲಿ ನಿಯಂತ್ರಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದರು.
ಜಿ ಕ್ಷಯರೋಗ ನಿಯಂತ್ರಣಾ ಧಿಕಾರಿ ಡಾ.ಗಂಗಾಧರ್ ಮಾತನಾಡಿ, ಜಿಯಲ್ಲಿ ಜನವರಿಯಿಂದ ಇಲ್ಲಿಯ ವರೆಗೆ ೯೪೦ ಕ್ಷಯ ರೋಗ ಪ್ರಕರಣ ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿzರೆ. ಹಾಗೂ ಹೆಚ್‌ಐವಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಡಿಹೆಚ್‌ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್, ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಶ್ರೀಧರ್ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಆಡಳಿತಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.