ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಿನ್ನೆಲೆ ಜಿಲ್ಲೆಯಾದ್ಯಂತ ೧೪೪ ಸೆಕ್ಷನ್ ಜಾರಿ

592

ದಾವಣಗೆರೆ :

     ಕೊರೊನಾ ವೈರಸ್‌ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಒಂದು ವಾರ ಮಾ.೨೪ ರಿಂದ ಏಪ್ರಿಲ್ ೦೧ ರವರೆಗೆ ಹಲವು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲೆಯಾದ್ಯಂತ ೧೪೪ ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕೋವಿಡ್-೧೯ ರ ಶುಶ್ರೂಷಾ ಉದ್ದೇಶ ಮತ್ತು ಶಾಸನಬದ್ದ ಹಾಗೂ ನಿಯಂತ್ರಣ ಪ್ರಕಾರ್ಯಗಳನ್ನು ಹೊರತುಪಡಿಸಿ ಐದು ವ್ಯಕ್ತಿಗಳಿಗಿಂತ ಹೆಚ್ಚಿನ ಎಲ್ಲಾ ಸಮೂಹ ಒಗ್ಗೊಡುವಿಕೆ ಮತ್ತು ಹಬ್ಬಗಳು ಒಗ್ಗೊಡುವಿಕೆಯನ್ನು ನಿಷೇಧಿಸಲಾಗಿದೆ. ಹಾಗೂ ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೊಡುವಿಕೆ ಮತ್ತು ಹಬ್ಬಗಳ ಒಗ್ಗೊಡುವಿಕೆಯನ್ನು ನಿಷೇಧಿಸಲಾಗಿದೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರದಂತೆ ನಿರ್ಬಂಧಿಸುವುದು ಅವಶ್ಯವೆಂದು ಕಂಡು ಬಂದಿರುವುದರಿಂದ ಸಿಆರ್‌ಪಿಸಿ ೧೯೭೩ ರ ಕಲಂ ೧೪೪ ರನ್ವಯ ಮಾ.೨೪ ರಿಂದ ಏಪ್ರಿಲ್ ೦೧ ಜಿಲ್ಲೆಯಾದ್ಯಂತ ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೆಧಿಸಿ, ನೀಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.