ಕೊರೋನಾ ನಿವಾರಣೆ ಬಳಿಕ ನೇಮಕಾತಿಗೆ ಯತ್ನ: ಪ್ರೊ| ವೀರಭದ್ರಪ್ಪ

499

ಶಂಕರಘಟ್ಟ: ಕುವೆಂಪು ವಿವಿ ಸಮಗ್ರ ಬೆಳವಣಿಗೆಯ ದೃಷ್ಟಿಯಿಂದ ಸುಮಾರು ೧೭೮ ಬೋಧಕರು ಮತ್ತು ೨೫೦ ಬೋಧಕೇತರ ನೌಕರರ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೋವಿಡ್-೧೯ ಸಂಕಷ್ಟ ನಿವಾರಣೆ ಯಾದ ಬಳಿಕ ನೇಮಕಾತಿಗೆ ಚಾಲನೆ ನೀಡಲು ಪ್ರಯತ್ನಿಸುವುದಾಗಿ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ಹೇಳಿದರು.
ಕುವೆಂಪು ವಿವಿ eನಸಹ್ಯಾದ್ರಿ ಆವರಣದಲ್ಲಿರುವ ಬಸವ ಸಭಾ ಭವನದಲ್ಲಿ ನಡೆದ ವಿವಿ ಆಡಳಿತದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸರಾಸರಿಯನ್ನು ಸರಿದೂಗಿಸಲು ಮತ್ತು ಆಡಳಿತ ಯಂತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಅತ್ಯವಶ್ಯಕವಾಗಿದ್ದು, ಇದನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲಾಗಿದೆ. ಕೋರೋನಾ ಸೋಂಕು ನಿಯಂತ್ರಣಕ್ಕೆ ಬಂದ ಬಳಿಕ ನೇಮಕಾತಿಗೆ ಚಾಲನೆ ನೀಡಲು ಸರ್ವಪ್ರಯತ್ನ ಮಾಡಲಾಗುವುದು ಎಂದರು.
ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಅಂತಿಮ ಸೆಮೆಸ್ಟರ್‌ನ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಖಂಡಿತವಾಗಿಯೂ ನಡೆಸಲಾಗು ವುದು. ಇದುವರೆವಿಗೂ ಪರೀಕ್ಷೆಗಳನ್ನು ರದ್ಧುಗೊಳಿಸುವ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವಲ್ಲಿ ಮತ್ತು ವಿವಿಧ ಹುzಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎಲ್ಲ ಸೆಮೆಸ್ಟರ್‌ಗಳ ಅಂಕಗಳು ಮತ್ತು ಒಟ್ಟಾರೆ ಶೇಕಡಾವಾರು ಪ್ರಮಾಣ ಶೈಕ್ಷಣಿಕ ಅರ್ಹತೆ ಎಂದು ಪರಿಗಣಿಸ ಲ್ಪಡುತ್ತದೆ. ಹೀಗಾಗಿ ಸೆಪ್ಟೆಂಬರ್ ಅಂತ್ಯದ ವೇಳೆಗೆ ಪರೀಕ್ಷೆ ನಡೆಸಲು ಸನ್ನದ್ಧರಾಗಿದ್ದೇವೆ ಎಂದರು.
ಕುಲಸಚಿವ ಪ್ರೊ. ಎಸ್ ಎಸ್ ಪಾಟೀಲ್ ಮಾತನಾಡಿ, ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಸಾಂಸ್ಥಿಕ ವಾಗಿ ಮತ್ತು ಶೈಕ್ಷಣಿಕವಾಗಿ ಯೋಜನೆಗಳನ್ನು ರೂಪಿಸಲಾಗಿದ್ದು, ಕುಲಪತಿಗಳ ನೇತೃತ್ವದಲ್ಲಿ ಮುಂಬರುವ ದಿನಗಳಲ್ಲಿ ವಿಶ್ವವಿದ್ಯಾಲಯದ ರ್‍ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದರು.
ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ವೆಂಕಟೇಶ್ವರಲು, ಹಣಕಾಸು ಅಧಿಕಾರಿ ರಾಮಕೃಷ್ಣ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸರ್ಕಾರದ ಮಾರ್ಗಸೂಚಿಯ ಅನ್ವಯ ದೈಹಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.