ಕೊರೋನಾ ವೀಕೆಂಡ್ ಕರ್ಫ್ಯೂ ಹಿನ್ನಲೆ ಭಕ್ತರ ಆರೋಗ್ಯದ ದೃಷ್ಠಿಯಿಂದ ದೇವಳಕ್ಕೆ ಬೀಗ

255

(ಹೊಸ ನಾವಿಕ ನ್ಯೂಸ್)
ಹೊನ್ನಾಳಿ: ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಕುಂದೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಬೀಗ ಹಾಕಲಾಯಿತು.
ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜರಿಗೊಳಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಸಿ.ಕೆ. ಶೇಖರಪ್ಪ ತಿಳಿಸಿದರು.
ಏ.೨೪ರ ಶನಿವಾರ ಶ್ರೀ ಆಂಜನೇಯ ಸ್ವಾಮಿಯ ವಾರವಾಗಿರುವ ಕಾರಣ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇತ್ತು. ಭಕ್ತರ ಆರೋಗ್ಯದ ದೃಷ್ಠಿಯಿಂದ ದೇವಸ್ಥಾನಕ್ಕೆ ಬೀಗ ಹಾಕಲಾಗಿದ್ದು, ಯಾವ ಭಕ್ತರಿಗೂ ದೇವಸ್ಥಾನದೊಳಗೆ ಪ್ರವೇಶಕ್ಕೆ ಅನುಮತಿ ಇಲ್ಲ. ದೈನಂದಿನ ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಸಮಸ್ತ ಭಕ್ತರು ಸಹಕರಿಸುವಂತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕ ಕೆ.ಎಸ್. ಶ್ರೀನಿವಾಸ್ ಹೇಳಿದರು.