ಕೊರೋನಾ ವೈರಸ್ ಹರಡದಂತೆ ಮುನ್ನಚ್ಚರಿಕೆ ವಹಿಸಿ : ಸರಳವಾಗಿ ಮನೆಯಲ್ಲಿಯೇ ಯುಗಾದಿ ಆಚರಿಸಿ

519

ಕೊರೋನಾ ವೈರಸ್ ಹರಡದಂತೆ ಮುನ್ನಚ್ಚರಿಕೆ ವಹಿಸಿ : ಸರಳವಾಗಿ ಮನೆಯಲ್ಲಿಯೇ ಯುಗಾದಿ ಆಚರಿಸಿ

ತುರ್ತು ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕ್ಷೇತ್ರದ ನಾಗರೀಕರಲ್ಲಿ ಮನವಿ

ಭದ್ರಾವತಿ, ಮಾ. ೨೪: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಮಂಗಳವಾರದಿಂದ ರಾಜ್ಯದೆಲ್ಲೆಡೆ ಕರ್ಪ್ಯೂ ಜಾರಿಗೊಳಿಸಿದ್ದು, ಇದನ್ನು ಅರ್ಥ ಮಾಡಿಕೊಂಡು ಕ್ಷೇತ್ರದ ನಾಗರೀಕರು ಯಾರು ಸಹ ಮನೆಯಿಂದ ಹೊರಬರದೆ ಯುಗಾದಿ ಹಬ್ಬವನ್ನು ಮನೆಯಲ್ಲಿಯೇ ಸರಳವಾಗಿ ಆಚರಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.

                ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಸರ್ಕಾರದ ವಿವಿಧ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾತನಾಡಿದರು. ಕೊರೋನಾ ವೈರಸ್ ಭೀಕರವಾಗಿದ್ದು, ರಾಜ್ಯದೆಲ್ಲೆಡೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಇದನ್ನು ಅರಿತುಕೊಂಡಿರುವ ಸರ್ಕಾರ ಮುಂಜಾಗ್ರತೆ ಕ್ರಮವಾಗಿ ಈಗಾಗಲೇ ರಾಜ್ಯದೆಲ್ಲೆಡೆ ಕರ್ಪ್ಯೂ . ಕ್ಷೇತ್ರದಲ್ಲಿ ಯಾರು ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಸಿದ್ದತೆಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.

                ಜನರು ಒಂದೆಡೆ ಗುಂಪು ಸೇರುವುದು ಕಡಿಮೆಯಾಗಬೇಕು. ಈ ಹಿನ್ನಲೆಯಲ್ಲಿ ಯಾರು ಸಹ ಅನ್ಯಗತ್ಯವಾಗಿ ಮನೆಯಿಂದ ಹೊರಬರದಂತೆ ಮುನ್ನಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ವಸ್ತುಗಳು ಲಭ್ಯವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೆಲವು ದಿನಗಳವರೆಗೆ ಕಟ್ಟುನಿಟ್ಟಿನ ಕ್ರಮ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

                ಜಿಲ್ಲಾ ಆರೋಗ್ಯ ಅಧಿಕಾರಿ(ಆರ್‌ಸಿಎಚ್) ನಾಗರಾಜ್‌ನಾಯ್ಕ್ ಮತ್ತು ತಾಲೂಕು ಆರೊಗ್ಯಾಧಿಕಾರಿ ಡಾ. ಎಂ.ಆರ್ ಗಾಯಿತ್ರಿ ಕೊರೋನಾ ವೈರಸ್ ಕುರಿತು ವಿವರವಾದ ಮಾಹಿತಿ ನೀಡಿದರು. ಕೊರೋನಾ ವೈರಸ್ ಉಲ್ಬಣಗೊಳ್ಳದಂತೆ ಎಚ್ಚರ ವಹಿಸುವುದು ಅನಿವಾರ್ಯವಾಗಿದೆ. ಉಲ್ಬಣಗೊಂಡಲ್ಲಿ ತಡೆಗಟ್ಟುವುದು ಅಸಾಧ್ಯವಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರು ಕಟ್ಟುನಿಟ್ಟಿನ ಕ್ರಮ ಪಾಲಿಸುವುದು ಅವಶ್ಯಕ ಎಂದರು.

                ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ಸೋಮಶೇಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್  ಉಪಾಧೀಕ್ಷಕ ಸುಧಾಕರ ನಾಯ್ಕ್ ಉಪಸ್ಥಿತರಿದ್ದರು.                 ಕಂದಾಯ, ಪೊಲೀಸ್, ಆರೋಗ್ಯ, ಕೃಷಿ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.