ಕೊರೋನಾ ಸಂಕಷ್ಟದಲ್ಲೂ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಡಿ: ವಿಪಕ್ಷದ ವಿರುದ್ಧ ಹರಿಹಾಯ್ದ ರೇಣುಕಾಚಾರ್ಯ

350

(ಹೊಸ ನಾವಿಕ ನ್ಯೂಸ್)
ಹೊನ್ನಾಳಿ: ರಾಜದ್ಯಂತ ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರಕಾರದ ಮಾರ್ಗಸೂಚಿ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕುಗಳ ಜನತೆಯಲ್ಲಿ ಮನವಿ ಮಾಡಿzರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿರುವ ಅವರು, ತಮಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಸರಕಾರಿ ನಿವಾಸದಲ್ಲಿ ಹೋಮ್ ಐಸೋಲೇಷನ್‌ನಲ್ಲಿದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.
ನಾನು ಬೆಂಗಳೂರಿನಲ್ಲಿದ್ದರೂ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಕ್ತ ಮಾರ್ಗದರ್ಶನ ನೀಡುವುದರ ಜೊತೆಗೆ ಅವಳಿ ತಾಲೂಕುಗಳಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬೇಕಾದ ಮುಂಜಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಪ್ರಧಾನಿ ಮೋದಿ ಅವರು ಎರಡು ಹಂತಗಳಲ್ಲಿ ಕೊರೊನಾ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಿದ್ದು, ಇದೀಗ ಮೂರನೇ ಹಂತದಲ್ಲಿ ಮೇ ೧ರಿಂದ ೧೮ ವರ್ಷ ಮೇಲ್ಟಟ್ಟವರಿಗೆ ಉಚಿತ ವಾಗಿ ನೀಡಲು ಮುಂದಾಗಿzರೆ. ಪ್ರತಿಯೊಬ್ಬರೂ ತಪ್ಪದೇ ಲಸಿಕೆ ಪಡೆಯಬೇಕು ಎಂದು ವಿನಂತಿಸಿದರು.
ಗರೀಬಿ ಕಲ್ಯಾಣ ಅನ್ನ ಯೋಜನೆಯಡಿ ದೇಶದ ೮೦ ಕೋಟಿ ಬಡವರಿಗೆ ಎರಡು ತಿಂಗಳು ಉಚಿತ ವಾಗಿ ಆಹಾರ ಧಾನ್ಯ ನೀಡಲು ನರೇಂದ್ರ ಮೋದಿ ನಿರ್ಧರಿಸಿದ್ದು ಸ್ವಾಗತಾರ್ಹ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದು ಕೋಟಿ ಲಸಿಕೆ ಖರೀದಿಸಿದ್ದು ಪ್ರತಿಪಕ್ಷಗಳು ಇದನ್ನು ಟೀಕಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ. ಪ್ರತಿಪಕ್ಷಗಳು ಕೊರೊನಾ ಸಂಕಷ್ಟದ ವೇಳೆ ಸರಕಾರಕ್ಕೆ ಸಹಕಾರ ನೀಡುವ ಬದಲು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದು ಹರಿಹಾಯ್ದರು.