ಕೊರೋನಾ ಸೋಂಕು ಇದೀಗ ಗ್ರಾಮೀಣ ಪ್ರದೇಶಕ್ಕೂ ಹಬ್ಬುತ್ತಿದೆ; ಎಚ್ಚರಿಕೆ ಅಗತ್ಯ: ಎಂಪಿಆರ್

428

ಹೊನ್ನಾಳಿ: ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ೭೫ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾ ಗಿದ್ದು, ಅದರಲ್ಲಿ ೫೫ ಜನರು ಗುಣಮುಖರಾಗಿzರೆ. ೨೦ ಸಕ್ರಿಯ ಪ್ರಕರಣಗಳಿದ್ದು ಜನರು ಎಚ್ಚರಿಕೆ ಯಿಂದ ಇರಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ತಾಲೂಕಿನ ಎಚ್. ಗೋಪಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ೧೭ ಕುಟುಂಬಗಳಿಗೆ ವೈಯಕ್ತಿಕ ವಾಗಿ ಆಹಾರದ ಕಿಟ್‌ಗಳನ್ನು ವಿತರಿಸಿ, ಗ್ರಾಮದ ಪ್ರತಿಯೊಂದು ಮನೆಗೂ ಉಚಿತವಾಗಿ ಮೂರರಿಂದ ನಾಲ್ಕು ಮಾಸ್ಕ್‌ಗಳನ್ನು ವಿತರಿಸಿ ಅವರು ಮಾತನಾಡಿದರು.
ತಾಲೂಕಿನ ಸೋಮನಮಪುರ ಹಾಗೂ ಎಚ್. ಗೋಪಗೊಂಡನಹಳ್ಳಿ ಗ್ರಾಮಗಳಲ್ಲಿ ಬೆಂಗಳೂರಿನಿಂದ ಬಂದಿದ್ದ ೨೩ ವರ್ಷದ ಇಬ್ಬರು ಯುವಕರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಎಚ್. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ೧೬ ಮನೆಗಳನ್ನು ಹಾಗೂ ಸೋಮನಮಪುರ ಗ್ರಾಮದಲ್ಲಿ ಒಂದು ಮನೆಯನ್ನು ಕಂಟೇನ್‌ಮೆಂಟ್ ಝೋನ್ ಮಾಡಲಾಗಿದೆ. ಹೊನ್ನಾಳಿ- ನ್ಯಾಮತಿ ತಾಲೂಕುಗಳಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ೨೩ ಸಕ್ರಿಯ ಪ್ರಕರಣಗಳು ಜನರು ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವೈಯಕ್ತಿಕವಾಗಿ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಕೇವಲ ನಗರಗಳಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳು ಇದೀಗ ಗ್ರಾಮೀಣ ಪ್ರದೇಶಕ್ಕೂ ಹಬ್ಬುತ್ತಿದ್ದು, ಸೋಂಕು ಸಮುದಾಯಕ್ಕೆ ಹರಡುವುದಕ್ಕೂ ಮುನ್ನ ಜನರು ಜಗೃತರಾಗಬೇಕು. ವಿನಾಕಾರಣ ಮನೆಯಿಂದ ಹೊರಬರುವುದನ್ನು ನಿಲ್ಲಿಸಬೇಕು. ಕಡ್ಡಾಯವಾಗಿ ಸಾಮಾಜಿ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಬಳಸಬೇಕು ಗ್ರಾಮಸ್ಥರಿಗೆ ಮನವರಿಕೆ ಮಾಡಿದರು. ಗ್ರಾಮದಲ್ಲಿ ವದ್ಧೆಯೊಬ್ಬರಿಗೆ ಮಾಸ್ಕ್ ಹಾಕುವ ಮೂಲಕ ಮಾಸ್ಕ್‌ನ ಮಹತ್ವವನ್ನು ಗ್ರಾಮಸ್ಥರಿಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಎಂ.ಆರ್. ಮಹೇಶ್, ತಾಪಂ ಸದಸ್ಯ ಸಿ.ಆರ್. ಶಿವಾನಂದ್ ಸೇರಿದಂತೆ ಗ್ರಾಮದ ಮುಂಖಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.