ಕೋವಿಡ್ ಆದೇಶಕ್ಕೆ ಡೋಂಟ್ ಕೇರ್: ಅದ್ಧೂರಿ ಜಾತ್ರೋತ್ಸವ

481

ಹೊನ್ನಾಳಿ: ದೇಶಾದ್ಯಂತ ಕೊರೊನಾ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಜನ ಆಕ್ಸಿಜನ್ ಸಿಗದೆ ಪರದಾಡುತ್ತಿzರೆ. ಇಂತಹ ಸಂದರ್ಭದಲ್ಲಿ ಹೊನ್ನಾಳಿ ಕ್ಷೇತ್ರದ ಕ್ಯಾಸಿನಕೆರೆ ಗ್ರಾಮದಲ್ಲಿ ಅದ್ಧೂರಿಯಾಗಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಡೆಸಲಾಗಿದೆ.
ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ಕೊರೊನಾ ನಿಯಮಾವಳಿ ಉಲ್ಲಂಘಿಸಿ ಜತ್ರೆ ಮಾಡಲಾಗಿದ್ದು, ನೂರಾರು ಭಕ್ತರು ಸೇರಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವವನ್ನು ಅದ್ಧೂರಿಯಾಗಿ ಆಚರಿಸಿzರೆ. ಜತ್ರೆ, ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಂತೆ ಸರ್ಕಾರದ ಆದೇಶವಿದ್ದರೂ, ಡೋಂಟ್ ಕೇರ್ ಎನ್ನುವಂತೆ ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ಜನ ರಥೋತ್ಸವ ಮಾಡಿzರೆ. ಹೀಗಾಗಿ ಜನರಲ್ಲಿ ಕೊರೊನಾ ಹರಡುವ ಭೀತಿ ಎದುರಾಗಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜಿಯಲ್ಲಿ ಸಹ ಭಾರೀ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿದೆ. ಆದರೂ ಜಿಲ್ಲಾಡಳಿತದ ಆದೇಶ ಮೀರಿ ಉತ್ಸವದ ನೆಪದಲ್ಲಿ ಈ ರೀತಿಯಲ್ಲಿ ಜನರು ವರ್ತಿಸುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.