ಕೋವಿಡ್ ಕರ್ಫ್ಯೂ: ಪೊಲೀಸರಿಗೆ ತಂಪು ಪಾನೀಯ ವಿತರಿಸಿದ ಯುವ ಕಾಂಗ್ರೆಸ್ ಪಡೆ…

342

ಹೊಸ ನಾವಿಕ ನ್ಯೂಸ್ : ಕೊರೋನಾ ವೀಕೆಂಡ್ ಕರ್ಫ್ಯೂ ನಿಮಿತ್ತ ಶಿವಮೊಗ್ಗ ಜಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕರ ರಕ್ಷಣೆಯ ಜವಾಬ್ದಾರಿ ಹೊತ್ತು ಉರಿಬಿಸಿಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ತಂಪು ಪಾನೀಯಗಳನ್ನು ವಿತರಿಸಲಾಯಿತು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಜಿ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ಬಿ. ಲೋಕೇಶ್, ಎಸ್ ಕುಮರೇಶ್, ಯುವ ಕಾಂಗ್ರೆಸ್ ಮುಖಂಡರಾದ ಆರ್ ಕಿರಣ್ ಪದಾಧಿಕಾರಿಗಳಾದ ಗಗನ್ ಪವನ್, ಮಣಿ, ಪೂರ್ವಿಕ್ ಚಂದನ್ ನಿಹಾರ್ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.