ಕ್ರಿಯಾಶೀಲ ಶಾಸಕ ರೇಣುಕಾಚಾರ್ಯರಿಗೆ ಸಚಿವ ಸ್ಥಾನ ನೀಡಿ:ಆಗ್ರಹ

465

ಹೊನ್ನಾಳಿ: ವಿಧಾನಪರಿಷತ್ ಸದಸ್ಯರ ಆಯ್ಕೆ ಆಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ಕನಸು ಗರಿಗೆದರಿದೆ. ಸಾಕಷ್ಟು ಶಾಸಕರು ಸಚಿವ ಸ್ಥಾನದ ಕನಸನ್ನು ಬದಿಗಟ್ಟಿ ಸರ್ಕಾರ ರಚನೆಗೆ ಸಹಕಾರ ನೀಡಿದವರಿಗೆ ಮಂತ್ರಿಸ್ಥಾನವನ್ನು ಬಿಟ್ಟುಕೊಡುವ ಮೂಲಕ ಸಿಎಂ ಯಡಿಯೂರಪ್ಪನವರ ಬೆನ್ನಿಗೆ ನಿಂತಿದ್ದರು.
ಇದೀಗ ಸರ್ಕಾರ ಒಂದು ವರ್ಷ ಪೂರೈಸುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದೆ. ಅದರಲ್ಲಿ ಮುಖ್ಯವಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮೂರು ಬಾರಿ ಶಾಸಕರಾಗಿದ್ದು, ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದಾರೆ. ಈ ಕಾರಣದಿಂದ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ತಾಲೂಕುಗಳಲ್ಲಿ ಕೇಳಿಬರುತ್ತಿದೆ.
ನನಗೆ ಸಚಿವ ಸ್ಥಾನ ಮುಖ್ಯವಲ್ಲ ಜಿಯ ಅಭಿವೃದ್ಧಿ ಮುಖ್ಯ ಎಂದಿರುವ ರೇಣುಕಾಚಾರ್ಯ ಅವರು, ತಾಲೂಕಿನಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡು ಕೊರೋನ ಸೋಂಕು ಕುರಿತು ಜಾಗೃತಿ ಮೂಡಿಸಿ, ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿ, ಊಟಕ್ಕೆ ನೀಡಿತ್ತಾ ಜೊತೆಗೆ ತಾಲೂಕಿನ ಅಭಿವೃದ್ಧಿಗೆ ತಮ್ಮನ್ನು ತೊಡಗಿಸಿಕೊಂಡು ತೊಡಗಿಸಿzರೆ
ಈಗಾಗಲೇ ಅವಳಿ ತಾಲೂಕುಗಳಾದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಾದ್ಯಂತ ಕೊಟ್ಟ್ಯಾಂತರ ರೂಪಾಯಿಗಳ ಕಾಮಗಾರಿಗಳನ್ನು ಉದ್ಘಾಟಿಸಿ ಇದರ ಜೊತೆಗೆ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವುದರ ಮೂಲಕ ಸೈ ಎನಿಸಿಕೊಂಡಿzರೆ.
ಇದೀಗ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸುತ್ತಿದ್ದಂತೆ ಅವಳಿ ತಾಲೂಕುಗಳಾದ ನ್ಯಾಮತಿ ಹೊನ್ನಾಳಿಯಲ್ಲಿ ರೇಣುಕಾಚಾರ್ಯಗೆ ಈ ಬಾರಿ ಸಚಿವ ಸ್ಥಾನ ನೀಡಬೇಕೆಂಬ ಕೂಗು ಮುಂಚೂಣಿಗೆ ಬಂದಿದೆ.
ಜಿಯಲ್ಲಿರುವ ಐವರು ಬಿಜೆಪಿ ಶಾಸಕರಿಗೆ ಹೋಲಿಸಿದರೆ ಅತ್ಯಂತ ಕ್ರಿಯಾಶೀಲ ಶಾಸಕ ಎಂದು ಗುರುತಿಸಿಕೊಂಡಿರುವ ರೇಣುಕಾಚಾರ್ಯ, ತಮ್ಮ ಕುಟುಂಬಕ್ಕಿಂತ ಜನರೆ ಮುಖ್ಯ ಎಂದು ತಿಳಿದು, ಅವಳಿ ತಾಲೂಕುಗಳಲ್ಲಿ ಕೊರೋನಾ ಕೋಂಕು ಕುರಿತು ಜನ ಜಾಗೃತಿ ಮೂಡಿಸುತ್ತಿzರೆ. ಸಿಎಂ ಯಡಿಯೂರಪ್ಪನವರು ತಮ್ಮ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ