ಗಣಪತಿ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

393

ಸಾಗರ : ನಗರದ ಇತಿಹಾಸ ಪ್ರಸಿದ್ದವಾದ ಗಣಪತಿ ಕೆರೆ ಅಭಿವೃದ್ದಿ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಗಣಪತಿ ಕೆರೆ ಹಿತರಕ್ಷಣಾ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಉಚ್ಛ ನ್ಯಾಯಾಲಯವು ದಿನಾಂಕ ೦೬-೧೦-೨೦೨೦ಕ್ಕೆ ಕೇಸ್ ನಂಬರ್ ೬೪೩೬/೨೦೨೦ರ ಅಡಿಯಲ್ಲಿ ಗಣಪತಿ ಕೆರೆ ಒತ್ತುವರಿಗೆ ತೆರವಿಗೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ನ್ಯಾಯಾಲಯದ ಸೂಚನೆಯನ್ವಯ ಪಹಣಿ ಪ್ರಕಾರ ಸರ್ವೇ ಮಾಡಿ ದಿನಾಂಕ ೧೧-೧೧-೨೦೨೦ರೊಳಗೆ ವರದಿ ಸಲ್ಲಿಸುವಂತೆ ಆದೇಶ ಮಾಡಿದ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶ ಪಾಲನೆ ಮಾಡಿ, ಕೆರೆ ಸರ್ವೇ ಮಾಡಿ, ವರದಿ ಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ಯಲ್ಲಿ ಮುಂದಿನ ಆದೇಶದವರೆಗೆ ಈಗಾಗಲೆ ಕೆರೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಅಖಿಲೇಶ್ ಚಿಪ್ಳಿ, ಕೆ.ಎನ್.ಶ್ರೀಧರ್, ನಾರಾಯಣಮೂರ್ತಿ ಕಾನುಗೋಡು ಹಾಜರಿದ್ದರು.