ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ: ಸಚಿವ ಈಶ್ವರಪ್ಪ

466

ಶಿವಮೊಗ್ಗ: ಕಳೆದ ಒಂದು ವರ್ಷದ ಅವಧಿಯಲ್ಲಿ ಕುಡಿಯುವ ನೀರು, ಅಂತರ್ಜಲ ಅಭಿವದ್ಧಿ, ರಸ್ತೆ ಅಭಿವದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಸೇರಿದಂತೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಾ ಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಹಾಗೂ ಜಿ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಪಂ ಸಭಾಂಗಣದಲ್ಲಿಂದು ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಸರ್ಕಾರದ ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಡಿರುವ ಸಾಧನೆಗಳ ವಿವರಗಳನ್ನು ನೀಡಿದರು.
ಅಂತರ್ಜಲ ಯೋಜನೆ:
ಅಂತರ್ಜಲ ಯೋಜನೆಯಡಿ ಜಿಯಲ್ಲಿ ೨೭೭೫೪ ಕಾಮಗಾರಿಗಳನ್ನು ಅನುಷ್ಡಾನಗೊಳಿಸಲಾಗುತ್ತಿದ್ದು, ಈಗಾಗಲೇ ೧೪೪೪ ಕಾಮಗಾರಿಗಳು ಆರಂಭಗೊಂಡಿವೆ. ಜಲಾಮೃತ ಯೋಜನೆಯಡಿ ಕಳೆದ ಸಾಲಿನಲ್ಲಿ ೨೮ಕೆರೆಗಳನ್ನು ೫.೨೦ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು, ೨.೪೦ಕೋಟಿ ರೂ. ವೆಚ್ಚದಲ್ಲಿ ೧೪ಕೆರೆಗಳಿಗೆ ಈಗಾಗಲೇ ಕಾಯಕಲ್ಪ ನೀಡಲಾಗಿದೆ. ಈ ವರ್ಷ ಜಿಯ ೨೮೧ ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ೧೮೧ ಕೆರೆಗಳ ಅಭಿವದ್ಧಿಗೆ ಈಗಾಗಲೇ ೧೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
ಜಲ ಜೀವನ್ ಮಿಷನ್:
ಪ್ರತಿ ಮನೆಗೆ ಶುದ್ಧ ನೀರು ಪೂರೈಸುವ ಮನೆಮನೆಗೆ ಗಂಗೆ ಯೋಜನೆಯಡಿ ಜಿಯಲ್ಲಿ ೨೮೮೭೧೭ ಕುಟುಂಬಗಳಿಗೆ ೧೧೭೬ಕೋಟಿ ರೂ. ವೆಚ್ಚದಲ್ಲಿ ವೈಯಕ್ತಿಕ ನಲ್ಲಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಪ್ರಥಮ ಹಂತದಲ್ಲಿ ೩೬೯ಕೋಟಿ ರೂ. ಜಿಗೆ ಬಿಡುಗಡೆ ಮಾಡಲಾಗಿದೆ ಎಂದರು.
ಉದ್ಯೋಗ ಖಾತ್ರಿ ಯೋಜನೆ:
ನರೇಗಾ ಅಡಿ ಜಿಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕೇವಲ ೪ತಿಂಗಳ ಅವಧಿಯಲ್ಲಿ ೨೨.೪೭ಲಕ್ಷ ಮಾನವ ದಿನಗಳನ್ನು ಸಜಿಸಲಾಗಿರುವುದು ದಾಖಲೆಯಾ ಗಿದೆ. ಈ ವರ್ಷ ಹೊಸದಾಗಿ ೬೮೨೨ ಹೊಸ ಉದ್ಯೋಗ ಚೀಟಿಗಳನ್ನು ವಿತರಿ ಸಿದ್ದು ೪.೮೦ಕೋಟಿ ರೂ. ಕೂಲಿಯನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ೮೫ಸಾವಿರಕ್ಕೂ ಅಧಿಕ ರೈತರು ತಮ್ಮ ಜಮೀನುಗಳಲ್ಲಿ ಕಂದಕ ಬದು ಹಾಗೂ ೩೫ಸಾವಿರಕ್ಕೂ ಹೆಚ್ಚು ಕಷಿ ಹೊಂಡಗಳನ್ನು ನಿರ್ಮಿಸಿರುವುದು ದಾಖಲೆಯಾಗಿದೆ ಎಂದರು.
ಘನತ್ಯಾಜ್ಯ ವಿಲೇವಾರಿ:
ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಇದೇ ಮೊದಲ ಬಾರಿಗೆ ಕ್ರಮ ಕೈಗೊಳ್ಳಲಾಗಿದೆ. ಜಿಯ ೨೭೧ ಗ್ರಾಪಂಗಳ ಪೈಕಿ ೫೦ ಗ್ರಾಪಂಗಳ ಪ್ರಸ್ತಾವನೆ ಸರ್ಕಾರ ಅನುಮೋದಿಸಿದ್ದು, ವಾಹನ ಖರೀದಿ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಗ್ರಾಮೀಣ ರಸ್ತೆ ಅಭಿವದ್ಧಿ:
ರಾಜ್ಯದಲ್ಲಿ ಮೆದಲ ಹಂತದಲ್ಲಿ ೩೬೨೦ ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದ್ದು ಈಗಾಗಲೇ ೯೦೯ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ೨೦೬೩ ಕಿಮೀ ಉದ್ದದ ರಸ್ತೆ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದರು.
ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣಕ್ಕಾಗಿ ೧೫೦೦ಕೋಟಿ ರೂ. ವಿಶೇಷ ಅನುದಾನ ಒದಗಿಸಲಾಗಿದ್ದು, ಒಟ್ಟು ೮೯೭೨ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಹೇಳಿದರು.
ಕುಡಿಯುವ ನೀರು ಪೂರೈಕೆ:
ರಾಜ್ಯದ ೪೯ ಬರಪೀಡಿತ ತಾಲೂಕುಗಳಿಗೆ ತಲಾ ೧ಕೋಟಿ ರೂ. ಹಾಗೂ ಇತರ ತಾಲೂಕುಗಳಿಗೆ ತಲಾ ೫೦ಲಕ್ಷ ರೂ. ಕುಡಿಯುವ ನೀರಿನ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ೪೭೪ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದ್ದು, ೧.೧೫ಕೋಟಿ ಗ್ರಾಮೀಣ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಎ ೬೦೧೨ ಗ್ರಾಮ ಪಂಚಾಯತ್ ಕಚೇರಿ ಕಟ್ಟಡಗಳಿಗೆ ೩.೪ಲಕ್ಷ ರೂ. ವೆಚ್ಚದಲ್ಲಿ ಸೋಲಾರ್ ಅಳವಡಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಜಿ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.