ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಎ ನೆರವು: ಸಿಎಂ

192

ಶಿವಮೊಗ್ಗ: ಕೋವಿಡ್ ಹಿನ್ನೆಲೆ ಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ eನ ದೀವಿಗೆ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಅಂತರ್ಜಾಲ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಅಡ್ಡಿಯುಂಟಾಗಿರುವುದು ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿ ಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಎ ರೀತಿಯ ನೆರವು ಒದಗಿಸಲಾಗುವುದು. ಖಾಸಗಿ ಸಂಸ್ಥೆಗಳು ಈ ರೀತಿಯ ಕಾರ್ಯಕ್ರಮ ಗಳಲ್ಲಿ ಸರ್ಕಾರದದೊಂದಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕೋವಿಡ್‌ನಿಂದಾಗಿ ಶಿಕ್ಷಣ ಕ್ಷೇತ್ರ ಸೇರಿದಂತೆ ರಾಜ್ಯದ ಆರ್ಥಿಕತೆಗೆ ತೀವ್ರ ಹಿನ್ನಡೆ ಉಂಟಾಗಿದೆ. ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ತೊಂದರೆ ಯಾಗದಂತೆ ಆನ್‌ಲೈನ್ ಶಿಕ್ಷಣ ಸೇರಿದಂತೆ ಪರ್ಯಾಯ ಕ್ರಮಗಳನ್ನು ಕೈಗೊಂಡಿದೆ. ಇದೀಗ eನ ದೀವಿಗೆ ಕಾರ್ಯಕ್ರಮದಡಿಯಲ್ಲಿ ರಾಜ್ಯದ ೨.೬೮ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದು, ರಾಜ್ಯದ ಎ ೩೦ ಜಿಗಳಲ್ಲಿ ಕಾರ್ಯಕ್ರಮ ಜರಿಯಾಗಲಿದೆ ಎಂದರು.
ಜನರಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಕೋವಿಡ್‌ನಿಂದ ಪಾರಾಗಲು ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.