ಚಿತ್ರದುರ್ಗ ಛಲವಾದಿ ಗುರಪೀಠದ ಪೀಠಾಧ್ಯಕ್ಷರ ಹೇಳಿಕೆ ಖಂಡಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ಜಿಲ್ಲಾ ಘಟಕದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.

481

ಶಿವಮೊಗ್ಗ,ಮಾ.೨೪: ಚಿತ್ರದುರ್ಗ ಛಲವಾದಿ ಗುರಪೀಠದ ಪೀಠಾಧ್ಯಕ್ಷರ ಹೇಳಿಕೆ ಖಂಡಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ಜಿಲ್ಲಾ ಘಟಕದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಗುರುಪೀಠದ ಪೀಠಾಧ್ಯಕ್ಷರಾದ ಬಸವನಾಗೀದೇವ ಸ್ವಾಮೀಜಿಯವರು ಲಂಬಾಣಿ, ಭೋವಿ, ಕೊರಚ, ಕೊರಮ ಹಾಗೂ ಇತರೆ ಜಾತಿಯವರ ಬಗ್ಗೆ ಟಿ.ವಿ. ಮಾಧ್ಯಮದ ಮೂಲಕ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದನ್ನು ನಮ್ಮ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದರು.

ಸ್ವಾಮೀಜಿಯವರು ಮೇಲ್ಕಂಡ ಜನಾಂಗಗಳ ಬಗ್ಗೆ ಟಿವಿ ಮಾಧ್ಯಮದಲ್ಲಿ ಮಾತನಾಡುವಾಗ ಕಳ್ಳರು, ಸುಳ್ಳರು ಎಂಬ ಪದಬಳಕೆ ಮಾಡಿ ನಿಂಧಿಸಿರುತ್ತಾರೆ. ಇದರಿಂದ ನಮಗೆ ಮಾನಸಿಕವಾಗಿ ನೋವಾಗಿದೆ. ಅಷ್ಟೇ ಅಲ್ಲ, ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಇವರು ವಾಕ್ ಸ್ವಾತಂತ್ರ್ಯವನ್ನೇ ದುರುಪಯೋಗಪಡಿಸಿಕೊಂಡು ಸಲ್ಲದ ಹೇಳಿಕೆನೀಡಿ ಜಾತಿಗಳ ನಡುವೆ ವಿಷಬೀಜಭಿತ್ತಿ ಸಮಾಜದಲ್ಲಿನ ಶಾಂತಿಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ಬಂಜಾರ ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

ಆದ್ದರಿಂದ ಬಸವನಾಗೀದೇವ ಸ್ವಾಮೀಜಿ ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಕೂಡಲೇ ಬಂಧಿಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ನೀಡುವ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್ ಸೇರಿದಂತೆ ಹಲವರಿದ್ದರು.