ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷ ಬಿಜೆಪಿ

391

ಶಿಕಾರಿಪುರ: ಜ.೨ ಹಾಗೂ ೩ ರಂದು ಶಿವಮೊಗ್ಗದ ಪಿಇಎಸ್ ಕಾಲೇಜು ಆವರಣದಲ್ಲಿನ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಷ್ಟ್ರೀಯ ಮುಖಂಡರ ಸಹಿತ ಪಕ್ಷದ ಪದಾಧಿಕಾರಿಗಳು ವಿವಿಧ ಮೋರ್ಚಾ ಸದಸ್ಯರು ಪಾಲ್ಗೊಳ್ಳಲಿ ದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿ ಅತಿ ದೊಡ್ಡ ರಾಜಕೀಯ ಪಕ್ಷ ಎಂಬ ಹಿರಿಮೆಗೆ ಪಾತ್ರವಾಗಿರುವ ಬಿಜೆಪಿ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದು ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ಜಾತಿ ಮತ ಬೇಧವಿಲ್ಲದೆ ಸಾಮಾನ್ಯ ವ್ಯಕ್ತಿಯಿಂದ ಪ.ಜಾತಿ ಪಂಗಡ ಹಿಂದುಳಿದ ವರ್ಗ ಬುಡಕಟ್ಟು ಜನಾಂಗದ ವ್ಯಕ್ತಿಗಳು ತಾ.ಪಂ, ಜಿ.ಪಂ, ವಿಧಾನಸಭೆ, ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಇದರಿಂದಾಗಿ ಬಿಜೆಪಿ ಸರ್ವ ವ್ಯಾಪಿ ಸರ್ವ ಸ್ಪರ್ಶಿಯ ಸಂಕಲ್ಪದ ಕನಸು ನನಸಾಗಿದೆ ಎಂದು ತಿಳಿಸಿದರು.
ಈಗಾಗಲೇ ಮಂಗಳೂರು ಹಾಗೂ ಬೆಳಗಾವಿಯಲ್ಲಿ ಪಕ್ಷದ ವಿಶೇಷ ಸಭೆ ಯಶಸ್ವಿಯಾಗಿ ನಡೆಸಲಾಗಿದೆ ಎಂದ ಅವರು, ೩ ನೇ ವಿಶೇಷ ಸಭೆಯು ಇದೇ ಜ.೨ ಹಾಗೂ ೩ ರಂದು ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪಕ್ಷದ ಸಭೆಯ ಆತಿಥ್ಯವನ್ನು ವಹಿಸಿಕೊಳ್ಳುವಲ್ಲಿ ಶಿವಮೊಗ್ಗ ಮುಂಚೂಣಿಯಲ್ಲಿದ್ದು ೧೯೭೧ರಲ್ಲಿ ಜನಸಂಘದ ರಾಜ್ಯ ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದ ಅಟಲ್‌ಜಿ ಖುದ್ದು ಪಾಲ್ಗೊಂಡಿದ್ದು ೧೯೮೬ರಲ್ಲಿ ಬಿ ಬಿ ಶಿವಪ್ಪನವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಿಣಿ, ೧೯೯೨ರಲ್ಲಿ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ, ೧೯೯೬ರಲ್ಲಿ ರಾಜ್ಯಾಧ್ಯಕ್ಷರಾಗಿದ್ದ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.
ಅತಿಥಿ ಸತ್ಕಾರದಲ್ಲಿ ಮುಂಚೂಣಿ ಯಲ್ಲಿರುವ ಶಿವಮೊಗ್ಗದಲ್ಲಿ ನಡೆಯ ಲಿರುವ ಸಭೆಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್, ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ರಾಷ್ಟ್ರೀಯ ನಾಯಕರು, ವಿವಿಧ ಮೋರ್ಚಾದ ರಾಜ್ಯಾಧ್ಯಕ್ಷರು, ಪ್ರ.ಕಾ ವಿವಿಧ ವಿಭಾಗದ ಪ್ರಬಾರಿ ಸಹಿತ ೨೦೦ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಗೋಹತ್ಯೆ ನಿಷೇಧಿಸುವ ನಿರ್ಣಯ ಕೈಗೊಂಡ ವಾರದಲ್ಲಿ ಸರ್ಕಾರ ಜಾರಿಗೊಳಿಸಲಾಗಿದ್ದು ಈ ದಿಸೆಯಲ್ಲಿ ಸಭೆಯಲ್ಲಿ ಚರ್ಚಿಸಿ ಸರ್ಕಾರ ಹಾಗೂ ಸಂಘಟನೆಗಾಗಿ ಕೈಗೊಳ್ಳುವ ನಿರ್ಣಯ ಅನುಷ್ಠಾನದ ಹಿನ್ನಲೆಯಲ್ಲಿ ಸಭೆ ಅತ್ಯಂತ ಮಹತ್ವವಾಗಿದೆ ಎಂದರು.
ಗ್ರಾ.ಪಂ ಚುನಾವಣೆಯನ್ನು ಪಕ್ಷ ಅತ್ಯಂತ ಗಂಬೀರವಾಗಿ ಪರಿಗಣಿಸಿದ್ದು, ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸವಾಗ ದಂತೆ ಬರಲಿರುವ ತಾ.ಪಂ, ಜಿ.ಪಂ, ವಿಧಾನಸಭೆ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲ್ಪಡುವ ಸಾಧ್ಯತೆ ಇದೆ. ಸಭೆಯ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ಸಹಿತ ಜಿಲ್ಲೆಯ ಎಲ್ಲ ಗಡಿ ಭಾಗ, ತಾಲೂಕು ಕೇಂದ್ರಗಳಲ್ಲಿ ಸ್ವಾಗತ ಕಮಾನುಗಳಿಂದ ವಿಶೇಷವಾಗಿ ಅಲಂಕರಿಸಲಾಗುವುದು ಎಂದ ಅವರು ಬಿಜೆಪಿ ದೇಶದ ಮೂಲೆಮೂಲೆಯ ಜನತೆಯನ್ನು ತಲುಪಿದ್ದು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ೧೪ ಕ್ಷೇತ್ರ ವಶಪಡಿಸಿಕೊಳ್ಳಲಾಗಿದೆ. ಜಮ್ಮು ಕಾಶ್ಮೀರದ ೬-೮ ಜಿಲ್ಲೆಗಳಲ್ಲಿ ಪಕ್ಷ ಪ್ರಾಭಲ್ಯಗಳಿಸಿದೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಪುರಸಭಾಧ್ಯಕ್ಷೆ ಲಕ್ಷ್ಮಿ, ಪರಶುರಾಮ ಚಾರ್ಗಲ್ಲಿ, ಸಿದ್ದಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.