ಜನಸ್ಪಂದನ ಸಭೆ : ಸಾರ್ವಜನಿಕರಿಂದ ಅರ್ಜಿಗಳ ಮಹಾಪೂರ…

384

ದಾವಣಗೆರೆ: ಜಿಡಳಿತ ಕಚೇರಿ ಸಭಾಂಗಣದಲ್ಲಿ ಜಿಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಸಭೆಯಲ್ಲಿ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ.
ಶಿವನಗರದ ನಸ್ರಿನ್‌ಬಾನು ಎಂಬುವವರು ಅರ್ಜಿ ಸಲ್ಲಿಸಿ ನನ್ನ ಅಕ್ಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಅಲ್ಲಿ ಕಾಣೆಯಾಗಿzರೆ. ಅವರನ್ನು ಹುಡುಕಿಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಧಿಕಾರಿ ಈ ಕುರಿತು ನಾನು ಸಂಸದರೊಂದಿಗೆ ಮಾತನಾಡಿ, ಭಾರತ ಸರ್ಕಾರಕ್ಕೆ ಪತ್ರ ಬರೆಯು ತ್ತೇನೆ. ನಂತರ ರಾಯಭಾರಿ ಕಚೇರಿ ಯಿಂದ ಸಂವಹನ ನಡೆಸಿ ಅವರನ್ನು ಹುಡುಕುವ ಕೆಲಸವನ್ನು ಪ್ರಾಮಾಣಿಕ ವಾಗಿ ಮಾಡುತ್ತೇನೆ ಎಂದು ಸಾಂತ್ವನ ಹೇಳಿದರು.
ನ್ಯಾಮತಿ ತಾಲ್ಲೂಕಿನ ಕೃಷಿಕರೋರ್ವರು ಕೃಷಿ ಇಲಾಖೆ ಜಮೀನಿನಲ್ಲಿ ಆಶ್ರಯ ಮನೆಗಳನ್ನು ಕಟ್ಟಲು ಅವಕಾಶ ಮಾಡಿಕೊಡಬೇಕೆಂದು ಜಿಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಧಿಕಾರಿಗಳು, ಈ ಸಂಬಂಧ ಈಗಾಗಲೇ ನನ್ನ ಮೇಲೆ ನ್ಯಾಯಾಂಗದಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೋರ್ಟ್‌ನಲ್ಲಿಯೇ ಉತ್ತರಿಸುತ್ತೇನೆ ಎಂದು ಅವರನ್ನು ವಾಪಸ್ಸು ಕಳುಹಿಸಿಕೊಟ್ಟರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಮೊದಲು ಕೃಷಿ ಇಲಾಖೆ ಜಮೀನಿನಲ್ಲಿ ಆಶ್ರಯ ಮನೆ ಕಟ್ಟಲು ಅವಕಾಶ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದು, ಇದು ಕೃಷಿ ಇಲಾಖೆಗೆ ಸಂಬಂಧ ಪಡುತ್ತದೆ ಎಂದು ತಿಳಿಸಿz. ನಂತರ ಅವಕಾಶವಿದ್ದರೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕೃಷಿ ಅಧಿಕಾರಿಗಳಿಗೆ ಪತ್ರ ಸಹ ಬರೆದಿz. ಆದರೆ ಅಧಿಕಾರಿಗಳು ಪ್ರತಿಕ್ರಿಯಿಸಿ ಆ ಜಮೀನಿನ ಅವಶ್ಯಕತೆ ಇದೆ. ಇಲ್ಲಿ ಕೃಷಿ ಫಾರ್ಮ್ ಇದ್ದು, ಮುಂದಿನ ಎ ಕೃಷಿ ಚಟುವಟಿಕೆಗಳಿಗೆ ಜಮೀನಿನ ಬಳಕೆ ಮಾಡಿಕೊಳ್ಳುವ ಕಾರಣ ಜಮೀನನ್ನು ಕೊಡಲಾಗುವುದಿಲ್ಲ. ಬದಲಾಗಿ ಬೇರೆ ಜಮೀನನ್ನು ಕೊಡಿಸಲು ಯತ್ನಿಸುತ್ತೇವೆ ಎಂದಿದ್ದರು. ಈ ಕಾರಣದಿಂದ ನನ್ನ ಮೇಲೆ ನ್ಯಾಯಾಂಗದಲ್ಲಿ ಪ್ರಕರಣ ದಾಖಲಿಸಿದ್ದು, ಕೋರ್ಟ್‌ಗೆ ಸಮಸ್ಯೆ ಕುರಿತು ಮನವರಿಕೆ ಮಾಡಿದ್ದೇವೆ ಎಂದರು.
ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿ, ಹೂವಿನಮಡು ಗ್ರಾಮದ ವೃದ್ಧರೋರ್ವರು ಅರ್ಜಿ ಸಲ್ಲಿಸಲು ಬರುವ ವೇಳೆ ಅವರನ್ನು ಡಿಸಿ ಯವರು ತಡೆದು ವೃದ್ದರ ಬಳಿಯೇ ಹೋಗಿ ಸಮಸ್ಯೆ ಆಲಿಸಿದರು. ಗ್ರಾಮದ ಸರ್ವೇ ನಂ.೧೫ರಲ್ಲಿ ೧೦ ಜನ ಅತೀ ಸಣ್ಣ ರೈತರಿದ್ದು, ಎಲ್ಲರೂ ಬುಡಕಟ್ಟು ಜನಾಂಗಕ್ಕೆ ಸೇರಿದ್ದೇವೆ. ಇಲ್ಲಿರುವ ಸುಮಾರು ೧೦ ಎಕರೆ ವಿಸ್ತೀರ್ಣದ ನೀರಾವರಿ ಕೃಷಿ ಜಮೀನಿನಲ್ಲಿ ೧ ಎಕರೆ, ೨೦ ಗುಂಟೆ ಹೀಗೆ ನಾವೆಲ್ಲರೂ ಜಮೀನನ್ನು ಹೊಂದಿದ್ದು, ಕಳೆದ ೬೦ ವರ್ಷಗಳಿಂದ ಸರ್ವೆ ನಂ.೧೪ರ ಬಸವರಾಜಪ್ಪ ಎಂಬುವವರ ಜಮೀನಿನಲ್ಲಿ ಉಪಕಾಲುವೆ ಮೂಲಕ ನೀರನ್ನು ಹರಿಸಿಕೊಳ್ಳತ್ತಾ ಬಂದಿದ್ದು, ಇದೀಗ ಕಾಲುವೆಗಳನ್ನು ಮುಚ್ಚಿzರೆ. ಅದನ್ನು ಕೂಡಲೇ ತೆರವುಗೊಳಿಸಿ ನೀರು ಹರಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಿಧಿಕಾರಿ ಪ್ರತಿಕ್ರಿಯಿಸಿ ಕೂಡಲೇ ಅದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗೆ ಸೂಚಿಸುತ್ತೇನೆ ಎಂದರು.
ನ್ಯಾಮತಿ ತಾಲ್ಲೂಕಿನ ಹಾಲೇಶ್ ಅರ್ಜಿ ಸಲ್ಲಿಸಿ, ಇಲ್ಲಿಯ ಶಿವಾನಂದಪ್ಪ ಬಡಾವಣೆಯಲ್ಲಿ ಸರ್ವೇ ನಂ. ೧೩೫ ರಲ್ಲಿ ಸುಮಾರು ೭೪ ಜನರಿಗೆ ಹಕ್ಕು ಪತ್ರ ನೀಡಿದ್ದು, ವಾಸವಿರುವ ೧೫ ಕುಟುಂಬಗಳನ್ನು ಕೈಬಿಟ್ಟು ವಾಸವಿಲ್ಲದಿರುವ ೧೪-೧೫ ಕುಟುಂಬಗಳಿಗೆ ಅಕ್ರಮ ಪತ್ರ ನೀಡಿ ಖಾತೆ ಏರಿಸಲಾಗಿದೆ ಆದ್ದರಿಂದ ತಾವೇ ಖುzಗಿ ಬಂದು ಪರಿಶೀಲಿಸಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಿಧಿಕಾರಿ ಪ್ರತಿಕ್ರಿಯಿಸಿ ತನಿಖೆ ನಡೆಸುತ್ತೇವೆ ಎಂದರು.
ಹೊನ್ನಾಳಿಯ ಪ್ರಕಾಶ್.ಸಿ.ಎಸ್ ಅರ್ಜಿ ಸಲ್ಲಿಸಿ ಇಲ್ಲಿಯ ಕೆನರಾ ಬ್ಯಾಂಕ್‌ನಲ್ಲಿ ರೂ.೨೦ ಸಾವಿರ ಸಾಲ ಪಡೆದು ಅದರ ಬಾಬ್ತು ತೀರಿಸಲು ಒಂದು ವರ್ಷ ಪಿಗ್ನಿ ಕಟ್ಟಿರುತ್ತೇನೆ. ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ವಿಚಾರಿಸಿದರೆ ಅಸಡ್ಡೆಯಿಂದ ಉತ್ತರಿಸಿ ಹಣ ಪಾವತಿಸಬೇಕೆಂದು ಮಾನಸಿಕ ಹಿಂಸೆ ನೀಡುತ್ತಿzರೆ. ಬ್ಯಾಂಕಿಗೆ ಅಸಲು ಮಾತ್ರ ಕಟ್ಟಲು ಸಾಧ್ಯವಾಗುತ್ತಿದ್ದು ಇದಕ್ಕೆ ಅವಕಾಶ ಮಾಡಿಕೊಡಬೇಕೆಂದು ಜಿಧಿಕಾರಿಗಳಿಗೆ ಮನವಿ ಮಾಡಿದರು. ಜಿಧಿಕಾರಿ ಲೀಡ್ ಬ್ಯಾಂಕ್ ಮ್ಯಾನೇಜರ್ ಗೆ ತಿಳಿಸಿ ಸೂಕ್ತಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಸಾಮಾಜಿಕ ಕಾರ್ಯಕರ್ತ ಎಂ.ಎಸ್. ಮಲ್ಲಿಕಾರ್ಜುನ ಇಂಗಳೇಶ್ವರ ಅರ್ಜಿ ಸಲ್ಲಿಸಿ, ಸುನಂದಮ್ಮ ಅವರಿಗೆ ಸರ್ಕಾರದಿಂದ ಮಂಜೂರಾಗಿರುವ ಡೊ.ನಂ. ೭೭೫/೧೬, ಹದಡಿ ರಸ್ತೆ, ತರಳಬಾಳು ಬಡಾವಣೆಯಲ್ಲಿ ೩೦*೨೫ ಅಳತೆಯಲ್ಲಿರುವ ಈ ಜಗವನ್ನು ನಿವೃತ್ತ ಸರ್ಕಾರ ನೌಕರರಾದ ಕೆ.ಬಿ.ಚನ್ನಪ್ಪ ಅವರು ಖರೀದಿ ಮಾಡಿ, ಮಹಾನಗರಪಾಲಿಕೆಯಿಂದ ಕಟ್ಟಡ ಪರವಾನಿಗೆ ಪಡೆಯದೆ ಮೂರು ಅಂತಸ್ತಿನ ಮಹಡಿ ಕಟ್ಟಿzರೆ. ಆದ ಕಾರಣ ಈ ಜಗವನ್ನು ಪರಿಶೀಲಿಸಿ, ವಾಪಸ್ ಪಡೆದು ಸರ್ಕಾರಿ ಕಚೇರಿಗೆ ಉಪಯೋಗಿಸಿಕೊಳ್ಳಬೇಕು ಎಂದು ಕೋರಿದರು. ಇದಕ್ಕೆ ಜಿಧಿಕಾರಿ ಪ್ರತಿಕ್ರಿಯಿಸಿ ಪಾಲಿಕೆ ಆಯುಕ್ತರಿಗೆ ತಿಳಿಸಿ, ಸೂಕ್ತ ತನಿಖೆ ಮಾಡಲು ಆದೇಶಿಸುತ್ತೇನೆ ಎಂದರು.
ಹರಿಹರ ತಾಲ್ಲೂಕಿನ ಹಲಸಬಾಳು ಗ್ರಾಮದ ಗ್ರಾಮಸ್ಥರಾದ ಬಸವರಾಜ, ಹಾಲಮ್ಮ ಸೇರಿದಂತೆ ಅನೇಕರು ಅರ್ಜಿ ಸಲ್ಲಿಸಿ ಗ್ರಾಮದ ಸರ್ವೇ ನಂ.೨೭ ರಲ್ಲಿ ಕಳೆದ ೭೫ ರಿಂದ ೮೦ ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಮಾಡುತ್ತಿದ್ದು, ನಮಗೆ ನಮ್ಮ ಮನೆಯ ಹಕ್ಕುಪತ್ರ ಕೊಡಬೇಕಾಗಿ ಮನವಿ ಮಾಡಿದ್ದು, ಈ ಕುರಿತು ತಾವುಗಳು ಸ್ಪಂದಿಸಿದ್ದೀರಿ. ಸಂಬಂಧಪಟ್ಟ ಎ ದಾಖಲೆಗಳನ್ನು ಸಲ್ಲಿಸಿದ್ದು, ನೋಟಿಸು ನೀಡದೆ, ನಮ್ಮ ಗಮನಕ್ಕೆ ತಾರದೆ, ಮುದ್ದತ್ತಿಗೂ ಅವಕಾಶ ಕೊಡದೇ, ವಕೀಲರಿಗೂ ತಿಳಿಸದೆ ಮನವಿಯನ್ನು ತಿರಸ್ಕರಿಸಿರುತ್ತಾರೆ. ಈ ಕುರಿತು ನಮಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದರು. ಇದಕ್ಕೆ ಜಿಧಿಕಾರಿ ಪ್ರತಿಕ್ರಿಯಿಸಿ ಹರಿಹರದ ತಹಶೀಲ್ದಾರರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿzರೆ.
ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಲ್ಲಿಕಾರ್ಜುನ ಇಂಗಳೇಶ್ವರ ಅರ್ಜಿ ಸಲ್ಲಿಸಿ ಪಿಬಿ ರಸ್ತೆಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಹಿಂಭಾಗದಲ್ಲಿ ಕಟ್ಟಡ ಮಾಲೀಕರಾದ ಅಶೋಕ್ ಕುಮಾರ್ ಸಿಂಗ್ ಅವರು ಡೊ.ನಂ. ೧೧೩/೪ ರಲ್ಲಿ ರಾಜ ಕಾಲುವೆಯ ಮೇಲೆ ಒತ್ತುವರಿ ಮಾಡಿರುತ್ತಾರೆ ಎಂದು ದೂರು ನೀಡಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಆದ ಕಾರಣ ಕಟ್ಟಡ ಪರವಾನಿಗೆ ದಾಖಲೆಗಳನ್ನು ಪರಿಶೀಲಿಸಿ ಹೆಚ್ಚುವರಿ ಇದ್ದಲ್ಲಿ ಸೂಕ್ತ ಕ್ರಮ ತೆಗೆದುಕೊಂಡು ಕಟ್ಟಡ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.
ದಾವಣಗೆರೆ ಜಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಅರ್ಜಿ ಸಲ್ಲಿಸಿ ಸಾವಿರಾರು ಕೋಟಿ ರೂ. ಮಲ್ಯದ ಮಹಾನಗರಪಾಲಿಕೆ ವ್ಯಾಪ್ತಿಯ ಸರ್ಕಾರಿ ಜಗ, ರಾಜಕಾಲುವೆ, ಉದ್ಯಾನವನಗಳು, ಹೈ-ಟೆನ್ಶನ್ ಮಾರ್ಗದ ಜಗಗಳ ಒತ್ತುವರಿ ತೆರವುಗೊಳಿಸಬೇಕು. ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಧಿಕಾರಿಗಳು, ಇಂಜಿನಿಯರ್‌ಗಳ ಮೇಲೆ ಕೂಡಲೇ ಜಿಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಧಿಕಾರಿ ಪರಿಶೀಲಿಸುತ್ತೇವೆ ಎಂದರು.
ಕನ್ನಡ ಜಗೃತಿ ಸಮಿತಿ ಕಾರ್ಯದರ್ಶಿ ಅರ್ಜಿ ಸಲ್ಲಿಸಿ ನಲ್ಲೂರು ಗ್ರಾಮದಲ್ಲಿ ಸುಮಾರು ೧೨ ಮೆಡಿಕಲ್ ಅಂಗಡಿಗಳಿದ್ದು, ಕಳೆದ ಮೂರು ತಿಂಗಳಿಂದ ಭಾನುವಾರದಂದು ಸಂಪೂರ್ಣವಾಗಿ ಬಂದ್ ಮಾಡುತ್ತಿzರೆ. ಇದರಿಂದ ಗ್ರಾಮದ ಜನರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಧಿಕಾರಿ ಡಿಹೆಚ್‌ಓರವರಿಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಗ್ರಾಮದ ಸ್ಥಳೀಯ ಹೈದರ್ ಅಲಿ ಖಾನ್ ಅರ್ಜಿ ಸಲ್ಲಿಸಿ ಕೆರೆಬಿಳಚಿ ಗ್ರಾಮಕ್ಕೆ ಬಸ್ ಬಿಡುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಆದೇಶಿಸಿದ್ದು, ಇಲ್ಲಿವರೆಗೂ ಸಾರಿಗೆ ಸೌಕರ್ಯ ಕಲ್ಪಿಸಿಲ್ಲ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಜಿಧಿಕಾರಿ ಕೆರೆಬಿಳಚಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಮಾಡುತ್ತೇವೆ ಎಂದರು.
ಮುದಹದಡಿ ಗ್ರಾಮದ ಆರ್.ಪರಶುರಾಮಪ್ಪ ಅರ್ಜಿ ಸಲ್ಲಿಸಿ ಗ್ರಾಮದ ಸರ್ವೇ ನಂ.೨೦/೩ ರಲ್ಲಿ ೩ ಎಕರೆ ೨೭ ಗುಂಟೆ ಜಮೀನಿನ ಬೆಳೆಗೆ ಹದಡಿ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಸಾಲ ಪಡೆದಿದ್ದು, ರೈತರ ಸಾಲ ಮನ್ನಾ ಯೋಜನೆಯಿಂದ ಮೆದಲನೆ ಕಂತು ನನ್ನ ಸಾಲಕ್ಕೆ ಜಮಾಗೊಂಡಿದೆ. ೨ನೇ ಕಂತು ಜಮಾಗೊಂಡು ವಾಪಸ್ ಹೋಗಿದೆ. ಸರ್ಕಾರದ ಈ ಯೋಜನೆಯನ್ನು ದೊರಕಿಸಿ ಕೊಡಿ ಎಂದರು. ಇದಕ್ಕೆ ಜಿಧಿಕಾರಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಆಲೂರು ಗ್ರಾಮದ ಗ್ರಾಮಸ್ಥರು ಅರ್ಜಿ ಸಲ್ಲಿಸಿ ಇಲ್ಲಿಯ ಗ್ರಾಮ ಲೆಕ್ಕಾಧಿಕಾರಿ ನಾಗರಾಜ ಮಪುರ ಎಂಬುವವರು ಜನಸಾಮಾನ್ಯರಿಗೆ ಸ್ಪಂದಿಸದೇ ಸರಿಯಾಗಿ ಕರ್ತವ್ಯ ನಿರ್ವಹಿಸದೇ ಇರುವ ಕಾರಣ ಅವರನ್ನು ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಿ, ಆ ಜಗಕ್ಕೆ ಬೇರೆಯವನ್ನು ನೇಮಿಸಿಕೊಡಬೇಕೆಂದು ಮನವಿ ಮಾಡಿದರು. ಜಿಧಿಕಾರಿಗಳು ಪ್ರತಿಕ್ರಿಯಿಸಿ ತನಿಖೆ ನಡೆಸುತ್ತೇವೆ ಎಂದರು.
ಸಭೆಯಲ್ಲಿ ಅಪರ ಜಿಧಿಕಾರಿ ಪೂಜರ ವೀರಮಲ್ಲಪ್ಪ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಡಿಹೆಚ್‌ಒ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್, ಕೌಸರ್ ಬಾನು, ಸೇರಿದಂತೆ ಜಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.