ಜಾನಪದ ಕಲಾವಿದರಿಗೆ ನೆರವಿಗಾಗಿ ಅರ್ಜಿ….

476

ಶಿವಮೊಗ್ಗ: ಕೋರೊನ ಹಿನ್ನೆಲೆಯಲ್ಲಿ ಎಲ್ಲೆಡೆ ಲಾಕ್‍ಡೌನ್ ಆದ ಪರಿಣಾಮ ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಅಗತ್ಯ ನೆರವಾಗುವಂತೆ ಎರಡು ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಲು ಈಗಾಗಲೇ ಕರ್ನಾಟಕ ಜಾನಪದ ಪರಿಷತ್ತಿನ ಮೂಲಕ ಅರ್ಹ ಕಲಾವಿದರ ಅರ್ಜಿಗಳನ್ನು ಸಂಗ್ರಹಿಸಲಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ. ಈ ಮೂಲಕ ಅರ್ಹ ಕಲಾವಿದರ ಬ್ಯಾಂಕ್ ಖಾತೆಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ನೇರವಾಗಿ ಹಣ ಜಮೆಯಾಗಲಿದೆ.
ಅರ್ಜಿಗಳ ಪರಿಶೀಲನೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದು, ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರ ತುರ್ತು ಆಹಾರದ ಅವಶ್ಯಕತೆಗಳಿದ್ದಲ್ಲಿ ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು, ತಾಲ್ಲೂಕು ತಹಶೀಲ್ದಾರರನ್ನು ಸಂಪರ್ಕ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ತು ರಾಜ್ಯ ಅಧ್ಯಕ್ಷ ಟಿ.ತಿಮ್ಮೇಗೌಡ  ತಿಳಿಸಿದ್ದಾರೆ.