ಜು.೨೮: ವೈದ್ಯಾಧಿಕಾರಿಗಳ ನೇರ ನೇಮಕಾತಿ

462

ಶಿವಮೊಗ್ಗ : ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುzಗಳಿಗೆ ತಾತ್ಕಾಲಿಕ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನಿಬಂಧನೆಗಳಿಗೊಳಪಟ್ಟು ಎಂ.ಬಿ.ಬಿ.ಎಸ್. ಪದವೀಧರರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದೆ.
ಅರ್ಹ ಅಭ್ಯರ್ಥಿಗಳನ್ನು ವಾಕ್-ಇನ್ ಇಂಟರ್‌ವ್ಯೂ ಮೂಲಕ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾ ಗುವುದು. ಆಯ್ಕೆಯಾದ ಅಭ್ಯರ್ಥಿಗೆ ೬೦,೦೦೦ ರೂ.ಗಳ ಮಾಸಿಕ ಸಂಚಿತ ವೇತನ ನೀಡಲಾಗುವುದು. ಇಲಾಖೆಯಿಂದ ಗುರುತಿಸಲ್ಪಟ್ಟ ಕಠಿಣ, ಅತಿಕಠಿಣ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ವಿಶೇಷ ಭತ್ಯೆ ನೀಡಲಾಗು ವುದು ಹಾಗೂ ನೇಮಕಾತಿಯನ್ನು ಹುzಗಳು ಭರ್ತಿಯಾಗುವವರೆಗೆ ನಿರಂತರವಾಗಿ ತೆಗೆದುಕೊಳ್ಳಲಾ ಗುವುದು.ಅಭ್ಯರ್ಥಿಗಳು ಮೂಲ ದಾಖಲಾತಿಗಳು ಹಾಗೂ ಅವುಗಳ ನಕಲು ಪ್ರತಿಗಳೊಂದಿಗೆ ಜು. ೨೮ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ಗಂಟೆಯವರೆಗೆ ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸ ಬಹುದಾಗಿದೆ ಎಂದು ಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿzರೆ.