ಡಿಸೆಂಬರ್ ೩೦ ಮತ್ತು ೩೧ರಂದು ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ – ರಥೋತ್ಸವ ಮತ್ತು ಹೂವಿನ ಅಡ್ಡಪಲ್ಲಕ್ಕಿ ಉತ್ಸವ

355

ಹೊನ್ನಾಳಿ: ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ ಮತ್ತು ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಡಿ.೩೦ ಮತ್ತು ೩೧ರಂದು ನಡೆಯಲಿವೆ.
ಪ್ರತಿ ವರ್ಷ ಸಾಮೂಹಿಕ ವಿವಾಹ ಸಮಾರಂಭ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್-೧೯ರ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹ ಸಮಾರಂಭ ರದ್ದುಪಡಿಸಲಾಗಿದೆ ಎಂದು ಶ್ರೀ ಗದ್ದಿಗೇಶ್ವರ, ಬಸವಣ್ಣ, ರಾಮೇಶ್ವರ ಕಮಿಟಿ ಅಧ್ಯಕ್ಷ ಟಿ.ಎಸ್. ಸೋಮಶೇಖರ್ ಹೇಳಿದರು.
೩೦ರ ಬುಧವಾರ ಬೆಳಿಗ್ಗೆ ೬ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಉರುಳು ಸೇವೆ, ಜವುಳ ಕಾರ್ಯಕ್ರಮ ನಡೆಯಲಿದ್ದು, ಅಂದು ರಾತ್ರಿ ೮ಕ್ಕೆ ಕಾರ್ತಿಕೋತ್ಸವ, ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿಯ ದೇವಸ್ಥಾನದಿಂದ ದೀಪ ರಥೋತ್ಸವ ಕಾರ್ಯಕ್ರಮ ಇದೆ. ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯನ್ನು ಕೈಲಾಸ ಸಭಾ ಮಂಟಪಕ್ಕೆ ತಂದು ಪೀಠಾರೋಹಣ ಮಾಡಲಾಗುವುದು. ರಾತ್ರಿ ೧೦ರಿಂದ ಅನ್ನಸಂತರ್ಪಣೆ ನಡೆಸಲಾಗುವುದು. ಕೂಲಂಬಿ ಗ್ರಾಮದ ಶ್ರೀ ಗದ್ದಿಗೇಶ್ವರ ಭಜನಾ ಮಂಡಳಿ ವತಿಯಿಂದ ದೀಪೋತ್ಸವವನ್ನು ರಾತ್ರಿ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.
೩೧ರ ಗುರುವಾರ ಬೆಳಿಗ್ಗೆ ೭ಕ್ಕೆ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ. ರಾತ್ರಿ ೭.೩೦ಕ್ಕೆ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ.
ಈ ಎ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಕಮಿಟಿಯ ಪದಾಧಿಕಾರಿಗಳು ಕೋರಿದ್ದಾರೆ.