ತಟ್ಟೆ ಬಾರಿಸಿ ರೈತ ಹೋರಾಟಕ್ಕೆ ಬೆಂಬಲಿಸಿದ ಎನ್‌ಎಸ್‌ಯುಐ..

902

ಶಿವಮೆಗ್ಗ: ಕೇಂದ್ರ ಸರ್ಕಾರ ಜರಿಗೆತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಶಿವಮೊಗ್ಗ ಜಿಎನ್‌ಎಸ್‌ಯುಐ ಬೆಂಬಲ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಹೋರಾಟಗಾರರು ಕರೆ ನೀಡಿದಂತೆ, ಪ್ರಧಾನಿ ಮೋದಿ ಮನ್ ಕೀ ಬಾತ್ ಭಾಷಣ ಸಂದರ್ಭದಲ್ಲಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಜಿ ಎನ್‌ಎಸ್‌ಯುಐ ಕಾರ್ಯಕರ್ತರು ತಟ್ಟೆ ಬಾರಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ದೆಹಲಿ ರೈತರ ಹೋರಾಟಕ್ಕೆ ಬೆಂಬಲಿಸಿ ಮನ್ ಕಿ ಬಾತ್ ಸಂದರ್ಭದಲ್ಲಿ ತಟ್ಟೆ ಬಾರಿಸಿ ಪ್ರತಿಭಟಿಸುವಂತೆ ಭಾರತೀಯ ಕಿಸಾನ್ ಯೂನಿಯನ್ ಕರೆಕೊಟ್ಟಿತ್ತು. ಅದರಂತೆ ಪ್ರತಿಭಟನೆ ನಡೆಸಿದ ಜಿ ಎನ್‌ಎಸ್‌ಯುಐ ಪದಾಧಿಕಾರಿಗಳು, ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು.
ದೆಹಲಿಯಲ್ಲಿ ಒಂದು ತಿಂಗಳಿಂದ ರೈತರು ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿzರೆ. ಇಡೀದೇಶಾದ್ಯಂತ ಕೃಷಿ ಕಾಯ್ದೆಗಳನ್ನು ಕೈಬಿಡುವಂತೆ ಲಕ್ಷಾಂತರ ರೈತರು ಒತ್ತಾಯಿಸಿದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಜರಿಗೆ ತಂದಿರುವ ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಾರೆ. ಕೇಂದ್ರ ಸರ್ಕಾರವು ಬಂಡವಾ ಶಾಹಿಗಳು ಹಾಗೂ ಉದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಧ್ಯಕ್ಷ ಎಚ್.ಎಸ್. ಬಾಲಾಜಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್, ಮಹಮದ್ ನಿಹಾಲ್, ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ವಿನ್ಯಾಸ್, ಮಂಜು ಪುರಲೆ, ಮಹಮದ್ ನಿಹಾಲ್, ಅಬ್ದುಲ್ ಸತ್ತರ, ಗಿರೀಶ್, ಶಿವು, ಭರತ್, ಸಂದೀಪ್, ಪ್ರಮೋದ್, ಆಕಾಶ್, ರವಿ, ಹೇಮಂತ್, ಸಂಜಯ್ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.