ತೋಟಗಾರಿಕಾ ತರಬೇತಿಗಾಗಿ ರೈತರಿಂದ ಅರ್ಜಿ ಆಹ್ವಾನ

517

ಶಿವಮೊಗ್ಗ, ಮಾರ್ಚ್ ೨೪ (ಕರ್ನಾಟಕ ವಾರ್ತೆ) : ತೋಟಗಾರಿಕಾ ಇಲಾಖೆಯು ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರಿಗೆ ದಿ: ೦೨.೦೫.೨೦೨೦ ರಿಂದ ೨೮.೦೨.೨೦೨೧ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ|| ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ೧೦ ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.

ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಅಭ್ಯರ್ಥಿ ಅಥವಾ ಅಭ್ಯರ್ಥಿಗಳ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. 

ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಗಳನ್ನು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ  www.harticulture.kar.nic.inನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ ೨೪ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.             ಹೆಚ್ಚಿನ ಮಾಹಿತಿಗಾಗಿ ದೂ.ಸಂ.: ೦೮೧೮೨-೨೨೨೭೯೪/ ೨೨೨೬೩೩ ನ್ನು ಸಂಪರ್ಕಿಸುವುದು.