ದತ್ತಾತ್ರಿಯವರನ್ನು ಆತ್ಮೀಯವಾಗಿ ಅಭಿನಂದಿಸಿದ ಕೆ.ಈ.ಕಾಂತೇಶ್…

446

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಎಸ್‌ಐಡಿಸಿ) ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಜಿಲ್ಲಾ ಬಿಜೆಪಿ ಮುಖಂಡ ಎಸ್. ದತ್ತಾತ್ರಿಯವರನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಈ.ಕಾಂತೇಶ್ ಆತ್ಮೀಯವಾಗಿ ಅಭಿನಂದಿಸಿದರು. ಪತ್ನಿ ಶ್ರೀರಂಜಿನಿ ದತ್ತಾತ್ರಿ, ಸೋದರ ಹಾಗೂ ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಡಾ. ಎಸ್. ಶ್ರೀಧರ್ ಸೇರಿದಂತೆ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.