ದಾಖಲೆಗಳಿಲ್ಲದೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ನಿರಾಧಾರ: ಎಂಪಿಆರ್

417

ಹೊನ್ನಾಳಿ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಎ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ತಮ್ಮ ಗುರಿಯಾಗಿದೆ. ಆ ಹಿನ್ನೆಲೆಯಲ್ಲಿ ಎ ಗ್ರಾಮಗಳಿಗೂ ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ದೇವಾಲಯದ ಬಳಿ ೫.೩೦ ಕೋಟಿ ರೂ.ಗಳ ಮೊತ್ತದ ವಿವಿಧ ಕಾಮಗಾರಿ ಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಕೂಲಂಬಿ ಗ್ರಾಮದಲ್ಲಿ ೫.೩೦ ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ರಸ್ತೆಗಳನ್ನು ಕಾಂಕ್ರಿಟ್ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಹಿಂದೆ ಕೂಲಂಬಿ ಗ್ರಾಮವನ್ನು ಸುವರ್ಣ ಗ್ರಾಮೋದಯ ಯೋಜನೆ ಯಡಿ ೧ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ೨ ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗಿದೆ. ಶಾಲೆಯ ಅಭಿವೃದ್ಧಿಗೆ ೧ ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ೧.೩೭ ಕೋಟಿ ರೂ.ಗಳ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ನಿರ್ಮಾಣ ಮಾಡಲಾಗಿದೆ. ಹೀಗೆ, ಒಟ್ಟು ೧೦.೬೭ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ವಿವರಿಸಿದರು.
ತಾಲೂಕಿನ ಮುಕ್ತೇನಹಳ್ಳಿ ಗ್ರಾಮ ದಲ್ಲಿ ಎಂ.ಪಿ. ರೇಣುಕಾಚಾರ್ಯ ೧.೪೭ ಕೋಟಿ ರೂ.ಗಳ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ- ಭೂಮಿಪೂಜೆ ನೆರವೇರಿಸಿದರು. ಮುಕ್ತೇನಹಳ್ಳಿ ಗ್ರಾಮದಲ್ಲಿ ೨೫.೫೯ ಲಕ್ಷ ರೂ.ಗಳ ವೆಚ್ಚದ ಸಿಸಿ ರಸ್ತೆಯನ್ನು ಉದ್ಘಾಟಿಸಿದರು. ೨೫ ಲಕ್ಷ ರೂ.ಗಳ ವೆಚ್ಚದ ಸಿಸಿ ರಸ್ತೆಗೆ ಮತ್ತು ೪.೪೨ ಲಕ್ಷ ರೂ.ಗಳ ವೆಚ್ಚದ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದರು. ೨೦ ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರೌಢಶಾಲಾ ಕೊಠಡಿ, ೬೦ ಲಕ್ಷ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ, ೨ ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಶಾಲೆಯ ಕಾಮಗಾರಿ, ೧೪ನೇ ಹಣಕಾಸು ಯೋಜನೆಯಡಿ ೧೦ ಲಕ್ಷ ರೂ.ಗಳ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದರು. ಕೆಂಗಲಹಳ್ಳಿ ಗ್ರಾಮದಲ್ಲಿ ೨.೧೬ ಕೋಟಿ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ, ಬಾಕ್ಸ್ ಚರಂಡಿ, ಡಾಂಬರ್ ರಸ್ತೆ, ಪ್ರಾಥಮಿಕ ಶಾಲಾ ಕೊಠಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬನ್ನಿಕೋಡು ಗ್ರಾಮದಲ್ಲಿ ೨.೦೫ ಕೋಟಿ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ, ಬಾಕ್ಸ್ ಚರಂಡಿ, ಪ್ರಾಥಮಿಕ ಶಾಲಾ ಕೊಠಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಆರೋಪ ನಿರಾಧಾರ:
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ಪರಿಕರಗಳ ಖರೀದಿಯಲ್ಲಿ ಅಕ್ರಮ ಎಸಗಿದೆ ಎಂಬ ವಿಪಕ್ಷಗಳ ಆರೋಪ ನಿರಾಧಾರ ಎಂದು ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯಾವುದೇ ದಾಖಲೆಗಳಿಲ್ಲದೇ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿzರೆ. ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಹಾಗಾಗಿ, ಈ ರೀತಿ ಮಾತನಾಡುತ್ತಿzರೆ. ಇದನ್ನು ಬಿಟ್ಟು, ಕೊರೊನಾ ನಿಯಂತ್ರಣದ ಹೋರಾಟ ದಲ್ಲಿ ಸರಕಾರದೊಂದಿಗೆ ವಿಪಕ್ಷಗಳು ಸಹಕರಿಸಬೇಕು ಎಂದು ತಿಳಿಸಿದರು.
ಜಗೃತಿ-ಹೋರಾಟ:
ಅಭಿವೃದ್ಧಿ ಜೊತೆಗೆ ಆರೋಗ್ಯವೂ ಮುಖ್ಯ. ಆದ್ದರಿಂದ, ನಾವೆಲ್ಲರೂ ಕೊರೊನಾ ವೈರಸ್ ಸೋಂಕಿನ ವಿರುದ್ಧ ಜಗತಿ ಮೂಡಿಸಿಕೊಳ್ಳುವ ಮುಖಾಂತರ ಹೋರಾಟ ನಡೆಸಬೇಕು ಎಂದು ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ವೈದ್ಯರು, ಪೊಲೀಸರು, ಅಂಗನವಾಡಿ-ಆಶಾ ಕಾರ್ಯಕರ್ತೆ ಯರು ಸೇರಿದಂತೆ ಅನೇಕರು ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿzರೆ. ಸಾರ್ವಜನಿಕರು ಇವರಿಗೆ ಸಹಕಾರ ನೀಡಬೇಕು. ಸ್ಯಾನಿಟೈಸರ್ ಬಳಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ನಾವು ಸಾವನ್ನೂ ಗೆಲ್ಲಬಹುದು. ಆದ್ದರಿಂದ, ಯಾರೂ ಕೊರೊನಾ ರೋಗಕ್ಕೆ ಹೆದರಬಾರದು. ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಅಧ್ಯಕ್ಷೆ ದೀಪಾ ಜಗದೀಶ್ ಮಾತನಾಡಿ, ಸದ್ಯಕ್ಕೆ ಕೊರೊನಾ ಔಷಧಿ ಇಲ್ಲದ ಕಾಯಿಲೆಯಾಗಿದೆ. ಆದ್ದರಿಂದ, ಸಾರ್ವಜನಿಕರು ಎಚ್ಚರದಿಂದ ಇರಬೇಕು. ಕೊರೊನಾ ರೋಗದ ವಿರುದ್ಧ ಹೋರಾಡಿ ಗೆಲ್ಲುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹೊನ್ನಾಳಿ ತಾಪಂ ಅಧ್ಯಕ್ಷ ಕೆ.ಎಲ್. ರಂಗನಾಥ್, ನ್ಯಾಮತಿ ತಾಪಂ ಅಧ್ಯಕ್ಷ ಎಸ್.ಪಿ. ರವಿ ಕುಮಾರ್, ಉಪಾಧ್ಯಕ್ಷ ಡಿ. ಮರಿಕನ್ನಪ್ಪ, ಕೂಲಂಬಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ ಪ್ರಶಾಂತ್, ಸದಸ್ಯರಾದ ಟಿ.ಬಿ. ಮಂಜುನಾಥ್, ಟಿ.ಜೆ. ರಮೇಶ್, ಬಿ.ಎಸ್. ಮೋಹನ್ ಕುಮಾರ್, ಕೆ.ಆರ್. ಅಜಯ್, ಮುಖಂಡರಾದ ಕೆ.ಎಸ್. ನಾಗರಾಜ್, ಮಲ್ಲಿಕಾರ್ಜುನ್, ಸಿದ್ಧಲಿಂಗಪ್ಪ, ಸಿ. ನಟರಾಜ್, ಬಿ.ಆರ್. ಲಿಂಗರಾಜ್, ಟಿ.ಎಂ. ಗದ್ದಿಗೇಶ್, ಟಿ.ಆರ್. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.