ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್‌ಟಿಒ ಕಚೇರಿ ಸೀಲ್ ಡೌನ್

463

ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್‌ಟಿಒ ಕಚೇರಿಗಳನ್ನು ಕೊರೊನಾ ಹಿನ್ನೆಲೆ ಸೀಲ್ ಡೌನ್ ಮಾಡಲಾಗಿದೆ.
ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಕಾರಣ ಇಂದಿನಿಂದ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.
ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದವರು ಮನೆಗೆ ವಾಪಸ್ ಆಗಿzರೆ. ಜಿಧಿಕಾರಿ ಕಾಂಪೌಂಡ್‌ನಲ್ಲಿನ ಆರ್‌ಟಿಒ ಕಚೇರಿ ಸಿಬ್ಬಂದಿಯೋರ್ವರಿಗೆ ಕೊರೊನಾ ಸೋಂಕು ದಢಪಟ್ಟ ಹಿನ್ನೆಲೆ ಆರ್‌ಟಿಒ ಕಚೇರಿಯನ್ನೂ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಈ ಹಿಂದೆ ಪೊಲೀಸ್ ಠಾಣೆ ಸೀಲ್ ಡೌನ್ ಆಗಿತ್ತು. ಸದ್ಯ ಆರೋಗ್ಯ ಕೇಂದ್ರ ಹಾಗೂ ಆರ್‌ಟಿಒ ಕಚೇರಿಗೂ ಕೊರೊನಾ ವಕ್ಕರಿಸಿ ಸೀಲ್ ಡೌನ್ ಆಗಿವೆ. ಅಂತೆಯೇ ನಗರದ ವಿವಿಧ ಬಡಾವಣೆಗಳಲ್ಲಿ ದಿನೇ ದಿನೇ ಸೋಂಕು ಹೆಚ್ಚುತ್ತಿದ್ದು, ಆತಂಕ ಮನೆ ಮಾಡಿದೆ.