ನನ್ನನ್ನು ಕ್ಷಮಿಸಿ: ರೇಣುಕಾಚಾರ್‍ಯ…

18

ಬೆಂಗಳೂರು: ನಾನು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ನನ್ನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸರ್ಕಾರಕ್ಕೆ ಒತ್ತಾಯಿಸಿzರೆ.
ಜನಸಾಮಾನ್ಯರಿಗೊಂದು, ಜನಪ್ರತಿನಿಧಿಗಳಿಗೊಂದು ನಿಯಮವಿಲ್ಲ. ನಾನು ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿದ್ದೇನೆ. ಇದಕ್ಕಾಗಿ ಕ್ಷಮೆಯನ್ನು ಕೇಳುತ್ತೇನೆ. ನನ್ನ ಕ್ಷೇತ್ರದ ಕಾರ್ಯಕರ್ತರ ಮೇಲೆ ಪೊಲೀಸರು ದೂರು ದಾಖಲಿಸುವುದು ಬೇಡ. ಎಲ್ಲವನ್ನು ನಾನು ಎದುರಿಸಲು ಸಿದ್ದವಿದ್ದೇನೆ.
ತಕ್ಷಣವೇ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಿ. ಈ ನೆಲದ ಕಾನೂನನ್ನು ಗೌರವಿಸುತ್ತೇನೆ ಎಂದು ಹೇಳಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಾನು ಕಾರ್ಯಕ್ರಮದಲ್ಲಿ ಭಾಗಿಯಾಗ ಬಾರದಿತ್ತು. ಜವಾಬ್ದಾರಿಯುತ ಶಾಸಕನಾಗಿ ನನ್ನ ಕರ್ತವ್ಯಗಳ ಬಗ್ಗೆ ಅರಿವಿದೆ. ಈಗಲೂ ಕೂಡ ನಾನು ಜನತೆಯಲ್ಲಿ ಕ್ಷಮೆ ಕೇಳುತ್ತೇನೆ. ಸರ್ಕಾರಕ್ಕಾಗಲಿ, ನಮ್ಮ ಪಕ್ಷಕ್ಕಾಗಲಿ, ಅಥವಾ ಸಂಘಟನೆಗಾಗಲಿ ಮುಜುಗರವಾಗಬಾರದು. ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡರೂ ಅದನ್ನು ಸ್ವಾಗತಿಸುವುದಾಗಿ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನನ್ನ ವಿರುದ್ಧ ದೂರು ದಾಖಲಿಸಬೇಕೆಂದು ಹೇಳಿzರೆ. ಇದಕ್ಕೆ ನನ್ನ ಅಭ್ಯಂತರವಿಲ್ಲ. ನಾನು ಈಗಲೂ ಕೂಡ ಅದಕ್ಕೆ ಬದ್ದ. ನನ್ನ ವಿರುದ್ದ ಎಫ್‌ಐಆರ್ ದಾಖಲಿಸಲಿ ಎಂದಿದ್ದೇನೆ.
ಡಿ.ಕೆ.ಶಿವಕುಮಾರ್ ಅವರೇ ನೀವು ಕ್ಷಮೆ ಕೇಳಲು ಸಿದ್ದರಿದ್ದೀರಾ ಎಂದು ಸವಾಲು ಹಾಕಿದರು. ಹೊನ್ನಾಳಿಯಲ್ಲಿ ಡಿ ಕೆ ಶಿವಕುಮಾರ್ ರಂತವರು ನೂರು ಜನ ಬಂದರೂ ಏನೂ ಮಾಡೋಕಾಗಲ್ಲ ಎಂದು ಇದೇ ಸಂದರ್ಭದಲ್ಲಿ ಆರ್ಭಟಿಸಿದರು.

      ————————————————-
ಸುದ್ದಿ , ಜಾಹೀರಾತು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ WhatsApp : 9482482182