ನಾಳೆಯಿಂದ ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ…

548

ಶಿವಮೆಗ್ಗ: ರಾಜ್ಯದ ಎಲ್ಲಾ ಪಶು ಆಹಾರ ಉತ್ಪನ್ನ ಘಟಕಗಳಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಈ ಕುರಿತು ವಿವರಿಸಿದ ಅವರು, ಪ್ರತಿ ಕ್ವಿಂಟಾಲ್‌ಗೆ ರೂ.೨,೦೦೦ ಇದ್ದ ಮೆಕ್ಕೆಜೋಳ ಇಂದು ಮಾರುಕಟ್ಟೆ ಯಲ್ಲಿ ೧,೨೦೦ ರೂ.ಗೆ ಬಂದು ನಿಂತಿದೆ. ಇದರಿಂದಾಗಿ ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ. ಈ ಅಹವಾಲನ್ನು ಆಲಿಸಿದ ಸರ್ಕಾರವು ರೈತರ ನೆರವಿಗೆ ಧಾವಿಸಿದ್ದು, ಯಾವುದೇ ಮದ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ಮೆಕ್ಕೆಜೋಳ ಬೆಳೆಗಾರರು ಅದರಲ್ಲೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರು ಗರಿಷ್ಟ ೫೦ಕ್ವಿಂಟಾಲ್‌ವರೆಗಿನ ತಮ್ಮ ಕೃಷಿ ಉತ್ಪನ್ನವನ್ನು ಪಶು ಆಹಾರ ಉತ್ಪನ್ನ ಘಟಕ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರಲ್ಲದೇ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ ಮತ್ತು ಶಿವಮೊಗ್ಗದ ಕೇಂದ್ರಗಳಲ್ಲಿ ಸುಮಾರು ೨೨,೦೦೦ ಮೆಟ್ರಿಕ್ ಟನ್‌ನಷ್ಟು ಮೆಕ್ಕೆಜೋಳ ಖರೀದಿಸುವ ಉದ್ದೇಶ ಹೊಂದಲಾಗಿದೆ. ರೈತರು ಹಿಂಗಾರು, ಮುಂಗಾರು ಮತ್ತು ಬೇಸಿಗೆ ಹಂಗಾಮು ಸೇರಿ ರಾಜ್ಯದ ೧೩.೧೪ಲಕ್ಷ ಹೆಕ್ಟೇರ್ ಭೂ ಪ್ರದೇಶದಲ್ಲಿ ೪೩.೯೭೦೦೦ಮೆಟ್ರಿಕ್ ಟನ್‌ನಷ್ಟು ಮೆಕ್ಕೆಜೋಳ ಬೆಳೆದಿದ್ದಾರೆ ಎಂದ ಅವರು, ಜಿಲ್ಲೆಯಲ್ಲಿ ಎಲ್ಲಾ ಹಂಗಾಮುಗಳು ಸೇರಿದಂತೆ ೫೭.೧೦೫ ಹೆಕ್ಟೇರ್ ಭೂ ಪ್ರದೇಶದಲ್ಲಿ ೨.೭೮ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದಾರೆ. ಒಂದು ಅಂದಾಜು ಸಮೀಕ್ಷೆಯಂತೆ ೨,೭೫,೦೦೦ಕ್ವಿಂಟಾಲ್ ಮೆಕ್ಕೆಜೋಳ ಇನ್ನೂ ಮಾರಾಟವಾಗದ ಇನ್ನೂ ರೈತರಲ್ಲಿಯೇ ಉಳಿದಿದೆ. ಶಿಕಾರಿಪುರ ಸಂಡದ ಪಶು ಆಹಾರ ಉತ್ಪಾದನಾ ಘಟಕದಲ್ಲಿ ೧೭೫೦/-ರೂ.ದರದಲ್ಲಿ ಸುಮಾರು ೮೦,೦೦೦ ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ತೀರ್ಮಾನಿಸಲಾಗಿದೆ ಎಂದರು.
ಬೆಳೆಗಾರರು ತಾವು ತಮ್ಮ ಹೊಲದಲ್ಲಿ ಬೆಳೆದ ಕೃಷಿ ಉತ್ಪನ್ನವನ್ನು ಪಹಣಿಯಲ್ಲಿ ಗುರುತಿಸಿಕೊಂಡಿರಬೇಕು. ಒಂದು ವೇಳೆ ನಮೂದಾಗಿರದಿದ್ದರೆ ಬೆಳೆದ ಬೆಳೆಯನ್ನು ಗಮನಿಸಿ ದೃಡೀಕರಣ ಪತ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ ಎಂದ ಅವರು, ರೈತರು ಕೆ.ಎಂ.ಎಫ್‌ನ ಫ್ರೂಟ್ಸ್ ತಂತ್ರಾಂಶದ ಮೂಲಕ ಶಿವಮೊಗ್ಗ ಶಿಮುಲ್ ವ್ಯಾಪ್ತಿಯಲ್ಲಿನ ೧೨೫೦ಹಾಲು ಉತ್ಪಾದಕರ ಸೊಸೈಟಿಗಳಿದ್ದು, ಅವುಗಳಲ್ಲಿ ಶಿವಮೊಗ್ಗ ಜಿಲ್ಲೆಯೊಂದ ರಲ್ಲಿ ೬೫೦ ಸೊಸೈಟಿಗಳಿವೆ. ಅಲ್ಲಿ ಕೃಷಿಕರು ತಮ್ಮ ಗುರುತು ಸಂಖ್ಯೆ ಯನ್ನು ನಮೂದಿಸಿ ಬೆಳೆಯನ್ನು ದಾಖಲಿಸಬಹುದಾಗಿದೆ ಎಂದರು.
ಕೊರೋನ ಸೋಂಕಿನಿಂದಾಗಿ ಸರ್ಕಾರವು ಲಾಕ್‌ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ರಾಜ್ಯ ಹೂವಿನ ಬೆಳೆಗಾರರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಸಾಧ್ಯವಾಗದೆ ನಷ್ಟ ಅನುಭವಿಸುತ್ತಿ ರುವುದು ನೋವಿನ ಸಂಗತಿ ಈ ಸಂದರ್ಭದಲ್ಲಿ ಸರ್ಕಾರವು ಪುಷ್ಪ ಕೃಷಿಕರಿಗೆ ಪ್ರತಿ ಹೆಕ್ಟೇರ್‌ಗೆ ೨೫,೦೦೦ ರೂ.ಗಳ ಸಹಾಯಧನವನ್ನು ನೀಡಲು ಉದ್ದೇಶಿಸಿರುವುದು ಸ್ವಾಗತಾರ್ಹ. ಜಿಲ್ಲೆಯಲ್ಲಿ ೧೫೧ಹೆ. ಪ್ರದೇಶದಲ್ಲಿ ಹೂವು ಬೆಳೆದ ೩೩೦ಪುಷ್ಪ ಬೆಳೆಗಾ ರರು ಈ ಯೋಜನೆಯಡಿ ಸಹಾಯ ಧನ ಪಡೆಯಲಿದ್ದಾರೆ ಎಂದರು.
ತಪ್ಪಿಸಿಕೊಳ್ಳಲು ಯತ್ನಿಸಿಲ್ಲ: ಮಹಾರಾಷ್ಟ್ರದ ಗಡಿಯಲ್ಲಿ ಸಿಲುಕಿದ್ದ ಜಿಲ್ಲೆಯ ಒಂಬತ್ತು ಜನರನ್ನು ಮಾನವೀಯ ದೃಷ್ಟಿಯಿಂದ ಜಿಲ್ಲೆಗೆ ಕರೆಸಿಕೊಂಡಿದ್ದು ಅದೃಷ್ಟವಶಾತ್ ಗಡಿಯಲ್ಲೇ ಕೊರೊನಾ ಸೋಂಕಿರು ವುದು ಪತ್ತೆಂi iಗಿರುವುದರಿಂದ ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಯಾವುದೇ ಕಾರಣಕ್ಕೂ ಜನರ ಮಧ್ಯೆ ಹರಡಿಲ್ಲ. ಜನರು ಆತಂಕಪಡದೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದರು.
ಸೋಂಕಿತರನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾಡಳಿತ ಉತ್ತಮ ಕೆಲಸ ಮಾಡಿದೆ ಎಂದ ಸಂಸದರು, ಸೋಂಕಿತರಿಗೆ ತಬ್ಲಿಘಿ ನಂಟು ಇದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲನೆ ನಡೆದಿದೆ. ಕ್ವಾರಂಟೈನ್ ಮಾಡುವ ಸಂದರ್ಭ ದಲ್ಲಿ ಅವರುಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂಬುದು ಸುಳ್ಳು ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್ ಉಪಸ್ಥಿತರಿದ್ದರು.