ಪಾಸಿಟಿವ್ ವ್ಯಕ್ತಿಗಳೊಂದಿಗೆ ವಿಡಿಯೋ ಕಾಲ್

440

ಶಿವಮೊಗ್ಗ: ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆ ಸೇರಿದಂತೆ ಉತ್ತಮ ಸೌಲಭ್ಯವನ್ನು ಖಾತ್ರಿಪಡಿಸಲು ಹಾಗೂ ಕರೋನಾ ನಿಯಂತ್ರಣಕ್ಕೆ ಸರ್ವೇಕ್ಷಣೆ (oqಛಿಜ್ಝ್ಝಿZಛಿ)ಯನ್ನು ಇನ್ನಷ್ಟು ತೀವ್ರಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಡಿಸಿ ಕಚೇರಿಯಲ್ಲಿ ಜಿ ಸರ್ವೇಕ್ಷಣಾ ಸಮಿತಿ ಸಭೆಯಲ್ಲಿ ಕರೋನಾ ನಿಯಂತ್ರಣ ಕುರಿತು ಸಮಾಲೋಚನಾ ಸಭೆ ನಡೆಸಿದರು.
ಮೂಲಸೌಲಭ್ಯ ಲಭ್ಯ: ಈಗಾಗಲೇ ತಾಲೂಕು ಆಸ್ಪತ್ರೆಗಳಲ್ಲಿ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಸೌಲಭ್ಯ ಸಜ್ಜುಗೊಳಿಸಲು ಸೂಚಿಸಲಾಗಿದೆ.
ಭದ್ರಾವತಿ ವಿಎಸ್‌ಐಎಲ್‌ನಲ್ಲಿ ಎ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಬಿದ್ದರೆ ಕರೋನಾ ಪಾಸಿಟಿವ್ ವ್ಯಕ್ತಿಗಳನ್ನು ದಾಖಲಿಸಲು ಸಜಗಿರ ಬೇಕು. ಗಾಜನೂರು ಮೊರಾರ್ಜಿ ದೇಸಾಯಿ ಹಾಸ್ಟೆಲ್ ಕೋವಿಡ್ ಕೇರ್ ಸೆಂಟರ್‌ನಲ್ಲಿ ೨೦೬ ಹಾಸಿಗೆ ವ್ಯವಸ್ಥೆ ಯಿದ್ದು, ಈಗಾಗಲೇ ೧೯೦ ಮಂದಿ ಇzರೆ. ಇದೇ ರೀತಿ ಮೇಲಿನ ಹಣಸವಾಡಿಯಲ್ಲಿ ಅಲ್ಪಸಂಖ್ಯಾತರ ಹಾಸ್ಟೆಲ್ ಸೆಂಟರ್‌ನಲ್ಲಿ ೧೫೯ ಹಾಸಿಗೆ, ನವುಲೆ ಬಿಸಿಎಂ ಹಾಸ್ಟೆಲ್ ಸೆಂಟರ್‌ನಲ್ಲಿ ೫೨ ಹಾಸಿಗೆಯೊಂದಿಗೆ ಎ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಇದೇ ರೀತಿ ಎ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಿ ಸೌಲಭ್ಯಗಳನ್ನು ಸಜ್ಜುಗೊಳಿಸ ಬೇಕು ಎಂದು ಸೂಚನೆ ನೀಡಿದರು.
ತೀವ್ರ ನಿಗಾ: ಹೊರ ರಾಜ್ಯಗಳಿಂದ ಬಂದವರು, ಕರೋನಾ ಪಾಸಿಟಿವ್ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕ ಹೊಂದಿದವರು ಕಟ್ಟುನಿಟ್ಟಾಗಿ ಹೋಂ ಕ್ವಾರೆಂಟೈನ್ ನಲ್ಲಿರುವುದನ್ನು ಖಾತ್ರಿಪಡಿಸಬೇಕು. ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕ ಹೊಂದಿದ ವ್ಯಕ್ತಿಗಳನ್ನು ಗುರುತಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸ್ಥಳೀಯ ಬಿಎಲ್‌ಒಗಳಿಗೆ ವಹಿಸಲಾಗಿದೆ. ಈ ಕುರಿತಾಗಿ ತರಬೇತಿಯನ್ನು ನೀಡಲಾಗು ತ್ತಿದೆ. ಇದನ್ನು ಪರಿಣಾಮಕಾರಿಯಾಗಿ ಮಾಡಿದರೆ ಸೋಂಕು ಹರಡುವುದನ್ನು ನಿಯಂತ್ರಿಸಬಹುದು. ಸೋಂಕಿತರು ಹಾಗೂ ಬಿಎಲ್‌ಒಗಳು ಕ್ವಾರೆಂಟೈನ್ ವಾಚ್ ಆಪ್‌ನಲ್ಲಿ ಪ್ರತಿದಿನ ಕಡ್ಡಾಯ ವಾಗಿ ತಮ್ಮ ಫೊಟೊ ಅಪ್‌ಲೋಡ್ ಮಾಡಬೇಕು. ಇದನ್ನು ಜಿಮಟ್ಟದ ಕಂಟ್ರೋಲ್ ರೂಂನಲ್ಲಿ ಸಮರ್ಪಕ ವಾಗಿ ಮಾನಿಟರ್ ಮಾಡಬೇಕು ಎಂದು ಹೇಳಿದರು.
ಸೌಲಭ್ಯ ತಪಾಸಣೆಗೆ
ವಿಡಿಯೋ ಕಾಲ್:
ಮೆಗ್ಗಾನ್ ಕೋವಿಡ್ ಆಸ್ಪತ್ರೆ ಹಾಗೂ ವಿವಿಧ ಕೋವಿಡ್ ಕೇರ್ ಸೆಂಟ ರ್‌ಗಳಲ್ಲಿರುವ ಕರೋನಾ ಪಾಸಿಟಿವ್ ವ್ಯಕ್ತಿಗಳೊಂದಿಗೆ ಪ್ರತಿನಿತ್ಯ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಲಭ್ಯ ಸೌಲಭ್ಯಗಳ ಕುರಿತು ಅವರ ಅನಿಸಿಕೆಗಳನ್ನು ಪಡೆಯಲಾಗುತ್ತಿದೆ. ಊಟ ಉಪಾಹಾರದ ವ್ಯವಸ್ಥೆ, ರೋಗ ಲಕ್ಷಣ ಇರುವವರಿಗೆ ನೀಡಲಾಗುತಿ ರುವ ವೈದ್ಯಕೀಯ ಸೌಲಭ್ಯ, ಶುಚಿತ್ವ ಸೇರಿದಂತೆ ವಿವಿಧ ವಿಷಯಗಳ ಕುರಿತು ಕರೋನಾ ಪಾಸಿಟಿವ್ ವ್ಯಕ್ತಿಗಳಿಂದ ನೇರವಾಗಿ ಅಭಿಪ್ರಾಯ ಪಡೆಯಲು ಇದರಿಂದ ಸಾಧ್ಯವಾಗುತ್ತಿದೆ ಎಂದು ಅಪರ ಜಿಧಿಕಾರಿ ಜಿ.ಅನುರಾಧ ಅವರು ತಿಳಿಸಿದರು.
ಮೆಗ್ಗಾನ್ ಕೋವಿಡ್ ಆಸ್ಪತ್ರೆ ಯಲ್ಲಿ ದಾಖಲಾಗುವ ಪ್ರತಿಯೊಬ್ಬ ರಿಗೂ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಬರೆಯಲು ಅರ್ಜಿ ನಮೂನೆಯನ್ನು ನೀಡಲಾಗುತ್ತಿದ್ದು, ಕುಂದು ಕೊರತೆಗಳನ್ನು ತಕ್ಷಣ ಸರಿಪಡಿಸಿಕೊಳ್ಳಬೇಕು ಎಂದು ಜಿಧಿಕಾರಿ ಅವರು ಈ ಸಂದರ್ಭದಲ್ಲಿ ಸೂಚಿಸಿದರು.
ಜಿಪಂ ಸಿಇಓ ವೈಶಾಲಿ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಮೆಗ್ಗಾನ್ ನಿರ್ದೇಶಕ ಡಾ| ಸಿದ್ದಪ್ಪ, ಜಿ ಆರೋಗ್ಯಾಧಿಕಾರಿ ಡಾ| ರಾಜೇಶ ಸುರಗಿಹಳ್ಳಿ, ಡಾ| ಶಂಕ್ರಪ್ಪ, ಡಾ| ರಘುನಂದನ್ ಮತ್ತಿತರರು ಉಪಸ್ಥಿತರಿದ್ದರು.