ಪೌರಕಾರ್ಮಿಕರಿಗೆ ಸಚಿವರಿಂದ ಆಹಾರ ಕಿಟ್ ವಿತರಣೆ

453

ದಾವಣಗೆರೆ: ಮಹಾನಗರಪಾಲಿಕೆ ಆವರಣದಲ್ಲಿ ಇಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಪೌರಕಾರ್ಮಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು.
ಈ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಶಾಮನೂರು ಶಿವಶಂಕರಪ್ಪ, ಪಾಲಿಕೆ ಮಹಾಪೌರರಾದ ಬಿ.ಜಿ.ಅಜಯಕುಮಾರ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗೋಣೆಪ್ಪ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ ಇದ್ದರು.