ಬಿಎಸ್‌ವೈ ಭೇಟಿಗೆ ಕೊರೋನಾ ಟೆಸ್ಟ್ ಕಡ್ಡಾಯ!

354

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಲು ಬರುವವರು ಕಡ್ಡಾಯ ವಾಗಿ ಆಂಟಿಜೆನ್ ಟೆಸ್ಟ್ ಮಾಡಿಸಿ ಕೊಳ್ಳಬೇಕಿದೆ. ಈಗಾಗಲೇ ಒಮ್ಮೆ ಕೋವಿಡ್ ಸೋಂಕಿಗೆ ಒಳಗಾಗಿ ಯಡಿಯೂರಪ್ಪನವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳ ಭೇಟಿಗೆ ಬರುವ ನಿಯೋಗ ಮತ್ತು ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ.
ಗೃಹ ಕಚೇರಿ ಕೃಷ್ಣಾ ಅಥವ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಜನರಿಗೆ ಆಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ. ವರದಿ ನೆಗೆಟಿವ್ ಬಂದರೆ ಮಾತ್ರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ದೊರೆಯಲಿದೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ಮತ್ತು ಕಾವೇರಿ ನಿವಾಸದ ಬಳಿ ಆಂಟಿಜೆನ್ ಟೆಸ್ಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಟೆಸ್ಟ್‌ನಲ್ಲಿ ಕೋವಿಡ್ ವರದಿ ನೆಗೆಟಿವ್ ಬಂದರೆ ಅವರನ್ನು ಮಾತ್ರ ಸಿಎಂ ಭೇಟಿಗೆ ಕಳಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ, ನಿವಾಸದ ಬಳಿ ನಡೆಯುವ ಆಂಟಿಜೆನ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಅವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗುತ್ತದೆ. ಆ ಪರೀಕ್ಷೆಯಲ್ಲೂ ಪಾಸಿಟಿವ್ ಬಂದರೆ ಅವರನ್ನು ಆಸ್ಪತ್ರೆಗೆ ಕಳಿಸಲು ವ್ಯವಸ್ಥೆ ಮಾಡಲಾಗುತ್ತದೆ. ಸಿಎಂ ಕಚೇರಿಗೆ ಪ್ರತಿದಿನ ಕೆಲವು ಅಧಿಕಾರಿಗಳು ಆಗಮಿಸುತ್ತಾರೆ. ಆದರೆ, ಅವರು ಪ್ರತಿದಿನ ಆಂಟಿಜೆನ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ. ವಾರಕ್ಕೊಮ್ಮೆ ಅವರ ಪರೀಕ್ಷೆಯನ್ನು ನಡೆಸಲಾಗುತ್ತದೆಂದು ಸ್ಪಷ್ಟಪಡಿಸಿದೆ.