ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ಶಿವಮೆಗ್ಗ ತಾಲ್ಲೂಕಿನಲ್ಲಿರುವ ತುಂಗಾ ಜಲಾಶಯವನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ತೆರಳಿ ವೀಕ್ಷಿಸಿದರು.
ಭೇಟಿಯ ವೇಳೆ ಜಲಾಶಯದ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ, ಬೇಸಿಗೆ ಹಂಗಾಮಿನ ಬೆಳೆಗಳಿಗೆ ಇರುವ ನೀರಿನ ಲಭ್ಯತೆ ಬಗ್ಗೆ, ಜಲಾಶಯದ ವಸ್ತು ಸ್ಥಿತಿಗಳ ಬಗ್ಗೆ ಮಾಹಿತಿ ಪಡೆದು ಕೊಂಡರು. ಜಲಾಶಯದ ಅಚ್ಚುಕಟ್ಟು ಭಾಗದಲ್ಲಿ ಇಲಾಖೆಯ ವತಿಯಿಂದ ಕೈಗೆತ್ತಿಕೊಂಡಿ ರುವ ಕಾಮಗಾರಿಗಳ ಸಂಪೂರ್ಣ ಮಾಹಿತಿ ಪಡೆದರು.
ತುಂಗಾ ಜಲಾಶಯದ ಅಚ್ಚುಕಟ್ಟು ಭಾಗದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಚರ್ಚಿಸಿದರು. ಜಲಾಶಯದ ಪುನಶ್ಚೇತನಕ್ಕೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ, ಜಲಾಶಯದಿಂದ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ನಂತರ ಜಲಾಶಯದ ಹೊರ ಬಿಡುವ ನೀರಿನಿಂದ ಉತ್ಪಾದಿಸುತ್ತಿರುವ ಖಾಸಗಿ ಒಡೆತನದ ಬಂದಾವನ್ ಹೈಡ್ರೋ ಪವರ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಘಟಕದ ಕಾರ್ಯ ನಿರ್ವಹಣೆ ಬಗ್ಗೆ ಪೂರ್ಣ ಮಾಹಿತಿ ಪಡೆದರು.