ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಅಧ್ಯಕ್ಷರಾಗಿ ವಿಜಯ್- ಕಾರ್‍ಯದರ್ಶಿಯಾಗಿ ಲಕ್ಷ್ಮಣ್

552

ಬೆಂಗಳೂರು: ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ (ರಿ)., ನವದೆಹಲಿಯ ೩೫ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಹಾಗೂ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಹಾಪ್ರಧಾನ ಕಾರ್ಯದರ್ಶಿಗಳ ಚುನಾವಣೆಯು ಇಲ್ಲಿನ ಗಾಂಧಿ ಭವನದ ಕಸ್ತೂರ್ಬಾ ಹಾಲ್‌ನಲ್ಲಿ ನಡೆಯಿತು.
ಅಧ್ಯಕ್ಷರಾಗಿ ಬೆಂಗಳೂರಿನ ಬಿ.ಜಿ. ವಿಜಯ್ ಅವರು ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಗುಜರಾತ್‌ನ ಲಕ್ಷ್ಮಣ್ ಪಟೇಲ್ ಅವರು ೩ನೇ ಬಾರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಜೀವನ್ ಪಿ.ಡಿ. ಸ್ಟೀಫನ್ ಅವರು ಇವರುಗಳ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷ ಸ್ಥಾನಕ್ಕೆ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಜನಾರ್ಧನ್ ಅವರು ನಾಮಪತ್ರ ಸಲ್ಲಿಸಿದ್ದು, ಅವರ ನಾಮಪತ್ರ ಕ್ರಮಬದ್ಧವಾಗಿರದೇ ಇದ್ದ ಕಾರಣದಿಂದಾಗಿ ಅದು ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ವಾರ್ಷಿಕ ಮಹಾಸಭೆಯಲ್ಲಿ ರಾಜ್ಯ ಘಟಕದ ಹಾಗೂ ರಾಜ್ಯದ ಎಲ್ಲ ೩೦ ಜಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.