ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಸಚಿವ ಭೈರತಿ

328

ದಾವಣಗೆರೆ: ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಪಾತ್ರ ದೊಡ್ಡದು ಎಂದು ಜಿ ಉಸ್ತುವಾರಿ ಸಚಿವ ಭೈರತಿ ಬಸವರಾಜ ಹೇಳಿದರು.
ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇಶವು ಮುಂದುವರೆಯಲು ಮತ್ತು ಪ್ರಗತಿಯತ್ತ ಸಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳಲ್ಲಿ ಉತ್ತಮ ಮಲ್ಯ ಹಾಗೂ ಅರಿವುಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಆ ಮೂಲಕ ತಮ್ಮ ಕಾರ್ಯವನ್ನು ಬಹಳಷ್ಟು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು.
ರಾಧಾಕೃಷ್ಣನ್ ಅವರನ್ನು ಸ್ಮರಿಸಲು ಈ ದಿನ ವಿಶೇಷವಾಗಿದೆ. ಒಬ್ಬ ಶಿಕ್ಷಕ ರಾಗಿ, ಶಿಕ್ಷಣ ತಜ್ಞರಾಗಿ ಅವರ ಕೊಡುಗೆ ಅಪಾರವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಬಹಳ ಎತ್ತರ ಸ್ಥಾನಕ್ಕೆ ತೆಗೆದುಕೊಂಡು ಹೋಗಿzರೆ. ಜೊತೆಗೆ ಹಲವಾರು ಹುz ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿzರೆ ಎಂದು ತಿಳಿಸಿದರು.
ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಒಂದು ಕಲ್ಲು ಗರ್ಭ ಗುಡಿಯೊಳಗೆ ಹೋಗಿ ದೇವರಾಗ ಬೇಕಾದರೆ ಅದಕ್ಕೆ ಶಿಲ್ಪಿ ದೇವರ ರೂಪ ಕೊಡುತ್ತಾನೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ನೀವು ಅವರನ್ನು ತಿದ್ದಿ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗಲು ಒಳ್ಳೆಯ ಮಾರ್ಗದರ್ಶನವೆಂಬ ರೂಪ ನೀಡಬೇಕು ಎಂದರು.
ಸರ್ವಪಲ್ಲಿ ರಾಧಕೃಷ್ಣನ್‌ನವರು ಸಾಮಾನ್ಯ ಶಿಕ್ಷಕರಾಗಿ ದೇಶದ ಅತ್ಯುನತ ರಾಷ್ಟ್ರಪತಿ ಹುz ಅಲಂಕರಿಸಿದರು. ಅವರಂತೆ ಅಬ್ದುಲ್ ಕಲಾಂ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಸಾಮಾನ್ಯ ಕುಂಟುಬದಲ್ಲಿ ಬೆಳೆದು ದೇಶಕ್ಕೆ ಹೆಸರು ತಂದಕೊಟ್ಟರು ಎಂದರು.
ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಮಾತನಾಡಿ, ಶಿಕ್ಷಕ ವೃತ್ತಿ ಎಂಬುದು ಬಹಳ ಶ್ರೇಷ್ಠವಾದ ವತ್ತಿ. ನಾನು ಕೂಡ ಒಬ್ಬ ಶಿಕ್ಷಕ. ಸಮಾಜವು ಇಂದು ಬದಲಾವಣೆ ಆಗಬೇಕಾದರೆ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಯಾವುದೇ ಬೇಧವಿಲ್ಲದೆ, ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲ ವಿದ್ಯಾರ್ಥಿಗಳನ್ನು ತಿದ್ದುವ ಕೆಲಸ ಶಿಕ್ಷಕರು ಮಾಡಬೇಕು ಎಂದರು.