ಮಕ್ಕಳ ಹಕ್ಕು ಕುರಿತ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ

407

ಶಿವಮೊಗ್ಗ : ನಗರದ ಸರ್ಕಾರಿ ವೀಕ್ಷಣಾಲಯ ಕಟ್ಟಡದ ಬಾಲ ನ್ಯಾಯ ಮಂಡಳಿ ಆವರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿ ಕಾನೂನು ಸೇವಾ ಪ್ರಾಧಿಕಾರ, ಬಾಲ ನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಜಿ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗದ ವತಿಯಿಂದ ಕಂದಾಯ ನಿರೀಕ್ಷಕರು, ಸಾರಿಗೆ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಶಿಕ್ಷಣ ಇಲಾಖೆ, ಪರಿಶಿಷ್ಟ ಜತಿ ಪಂಗಡ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯ ಹಿರಿಯ ಮೇಲ್ವಿಚಾರಕಿಯರಿಗೆ, ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳಿಗೆ ಹಾಗೂ ಎಸ್. ಜೆ .ಪಿ ಯು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮಕ್ಕಳ ದೈನಂದಿನ ಸಮಸ್ಯೆಗಳು, ಮಕ್ಕಳಿಗೆ ಸಂಬಂಧಿಸಿದ ಹಕ್ಕುಗಳು, ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ಹಾಗೂ ಮಕ್ಕಳ ಕುರಿತಾದ ಇತರೆ ಕಾನೂನುಗಳ ವಿಷಯವಾಗಿ ಜಿ ಮಟ್ಟದ ಪರಿಶೀಲನಾ ಮತ್ತು ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.