ಮರಣ ಪ್ರಮಾಣ ಇಳಿಕೆ-ಸ್ವಚ್ಚೆತೆಗೂ ಒತ್ತು ನೀಡಿ

468

ದಾವಣಗೆರೆ : ನಗರ ಮತ್ತು ಗ್ರಾಮೀಣ ಭಾಗದಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕೋವಿಡ್ ನಿಯಂತ್ರಣ ಕಾರ್ಯ ಕೈಗೊಳ್ಳಬೇಕು. ಜೊತೆಗೆ ಸ್ವಚ್ಚತೆ ಮತ್ತು ಅಭಿವೃದ್ದಿ ಕಡೆ ಗಮನ ಹರಿಸಬೇಕೆಂದು ಜಿಧಿಕಾರಿಗಳು, ಸಿಇಓ, ಎಸ್‌ಪಿ, ಪಾಲಿಕೆ ಆಯುಕ್ತರಿಗೆ ನಗರಾಭಿವೃದ್ದಿ ಮತ್ತು ಜಿ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಡಳಿತದೊಂದಿಗೆ ಸಭೆ ನಡೆಸಿದ ಅವರು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಯಲ್ಲಿ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ. ಇನ್ನೂ ಹೆಚ್ಚಿನ ರೀತಿಯಲ್ಲಿ, ಪರಿಣಾಮಕಾರಿಯಾಗಿ ಕಟ್ಟೆಚ್ಚರ ವಹಿಸಿ ಕಾರ್ಯೋನ್ಮುಖ ರಾಗಬೇಕು. ಮನೆ ಮನೆ ಸರ್ವೇ ಕಾರ್ಯ ಹೆಚ್ಚಿಸಬೇಕು ಎಂದರು.
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣ ಟಾಸ್ಕ್‌ಫೋರ್ಸ್ ಸಮಿತಿಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು. ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ಕೋವಿಡ್ ನಿಯಂತ್ರಿಸಬೇಕು. ರ್‍ಯಾಪಿಡ್ ಆಂಟಿಜೆನ್ ಟೆಸ್ಟ್ ಆರಂಭಿಸಬೇಕು ಎಂದು ಸೂಚನೆ ನೀಡಿದ ಅವರು, ದಾವಣಗೆರೆಯಲ್ಲಿ ಎರಡು ಮೆಡಿಕಲ್ ಕಾಲೇಜುಗಳು, ಉತ್ತಮ ಆಸ್ಪತ್ರೆಗಳಿದ್ದರೂ ಮರಣ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಿದೆ. ರಾಜ್ಯದ ಪ್ರಮಾಣ ಶೇ.೨.೧ ರಷ್ಟಿದ್ದರೆ ಜಿಯಲ್ಲಿ ಮರಣ ಪ್ರಮಾಣ ಶೇ.೩.೬೩ ಇದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ತಗ್ಗಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದರು
ಸ್ವಚ್ಚತೆಗೆ ಗಮನ ಕೊಡಿ: ಮಳೆಗಾಲ ಚುರುಕಾಗಿರುವುದರಿಂದ ನಗರದಲ್ಲಿ ರೋಗ ರುಜಿನಗಳು ಹೆಚ್ಚಾಗುವ ಸಂಭವ ಇರುತ್ತದೆ. ಆದ ಕಾರಣ ಪಾಲಿಕೆ ವತಿಯಿಂದ ನಗರ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಪೌರಕಾರ್ಮಿಕರ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು. ಅವರಿಗೆ ಸುರಕ್ಷತಾ ಸಾಮಗ್ರಿಗಳೊಂದಿಗೆ ಕೋವಿಡ್ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಖಾದ್ಯಗಳನ್ನು ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರಲ್ಲದೇ ಇನ್ನೊಮ್ಮೆ ನಗರದಾದ್ಯಂತ ಸ್ಯಾನಿಟೈಸ್ ಮಾಡಿಸುವಂತೆ ಹೇಳಿದರು.
ತಾಲ್ಲೂಕು ಭೇಟಿ ನೀಡಿ : ಡಿಸಿ, ಸಿಇಓ ಮತ್ತು ಎಸ್‌ಪಿ ತಂಡ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚೆಚ್ಚು ಗುಂಪು ಸೇರದಂತೆ ಎಸ್‌ಪಿ ಯವರು ಕ್ರಮ ವಹಿಸಬೇಕು. ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮ ಜರುಗಿಸಬೇಕು. ಜಿ ಪಂ ಸಿಇಓ ಗ್ರಾಮೀಣ ಭಾಗದಲ್ಲಿ ಟಾಸ್ಕ್‌ಫೋರ್ಸ್ ಸಮಿತಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕೋವಿಡ್ ನಿಯಂತ್ರಣದಲ್ಲಿ ಮುಖ್ಯ ಪಾತ್ರ ವಹಿಸಬೇಕು ಎಂದರು.
ಬೇರೆ ಜಿಗಳಲ್ಲಿ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದ್ದು ನಮ್ಮ ಜಿಯಲ್ಲಿ ಯಾವುದೇ ರೋಗಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಹಾಗೂ ಯಾವುದೇ ಲೋಪ ಬಾರದಂತೆ ಅಂತ್ಯಸಂಸ್ಕಾರ ಕೈಗೊಳ್ಳಬೇಕೆಂದರು.
ಬಹಳ ಮುಖ್ಯವಾಗಿ ನಿಯಂತ್ರಣ, ಪರಿಣಾಮಕಾರಿ ಚಿಕಿತ್ಸೆ, ಹಾಸಿಗೆಗಳ ಲಭ್ಯತೆ, ವೈದ್ಯರು, ಆಂಬುಲೆನ್ಸ್, ಪರೀಕ್ಷೆಗೆ ಹೆಚ್ಚಿನ ಗಮನ ಹರಿಸಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.
ಜಿಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಓ ಪದ್ಮಾ ಬಸವಂತಪ್ಪ, ಎಸ್‌ಪಿ ಹನುಮಂತರಾಯ ಮಾತನಾಡಿದರು.
ಸಭೆಯಲ್ಲಿ ಎಡಿಸಿ ಪೂಜರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ನಗರಾಭಿವದ್ದಿ ಕೋಶದ ಯೋಜನಾ ನಿರ್ದೇಶಕಿ ನಜ, ಡಿಹೆಚ್‌ಓ ಡಾ. ರಾಘವೇಂದ್ರ ಸ್ವಾಮಿ, ಡಿಎಸ್‌ಓ ಡಾ.ರಾಘವನ್, ಡಿಎಸ್ ಡಾ.ನಾಗರಾಜ್, ಜಿ ಮಟ್ಟದ ಅಧಿಕಾರಿಗಳು, ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಜರಿದ್ದರು.