ಮಳೆ ಹಾನಿ: ಆನೆಕೊಂಡ ಗ್ರಾಮಕ್ಕೆ ಪಾಲಿಕೆ ವಿಪಕ್ಷ ನಾಯಕರ ಭೇಟಿ

448

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆನೆಕೊಂಡ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ 58ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ಭೇಟಿ ನೀಡಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರ ಸೂಚನೆ ಮೇರೆಗೆ ಭೇಟಿ ನೀಡಿದ ನಾಗರಾಜ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮನೆಗಳನ್ನು ಪರಿಶೀಲಿಸಿ  ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆನೆಕೊಂಡ ಗ್ರಾಮದ ಬಹುತೇಕ ಮಳೆ ನೀರು ಚರಂಡಿಗಳಲ್ಲಿ ಹೂಳು ತುಂಬಿದ್ದು, ಹೂಳು ತೆಗೆಸುವಂತೆ ಅಧಿಕಾರಿಗಳಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಮಳೆ ಬಂದ ವೇಳೆ ಮನೆಗಳಿಗೆ ನೀರು ನುಗ್ಗದಂತೆ ಕ್ರಮಕೈಗೊಳ್ಳಬೇಕೆಂದು ಆದೇಶಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎ.ಎಸ್.ಕೊಟ್ರಯ್ಯ, ಗರಾಮ ಲೆಕ್ಕಾಧಿಕಾರಿ ಶಿವಕುಮಾರ್, ಪಾಲಿಕೆ ಮತ್ತು ತಾಲ್ಲೂಕು ಅಧಿಕಾರಿಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.