ಮುಂದಿನ ೧೫ದಿನ ವ್ಯಾಪಕ ಕರೋನಾ ಟೆಸ್ಟ್: ಡಿಸಿ ಶಿವಕುಮಾರ್ ಸೂಚನೆ

373

ಶಿವಮೊಗ್ಗ: ಕರೋನಾ ನಿಯಂತ್ರಿಸುವ ಕ್ರಮವಾಗಿ ಮುಂದಿನ ೧೫ ದಿನಗಳ ಕಾಲ ಜಿಯಾದ್ಯಂತ ವ್ಯಾಪಕವಾಗಿ ಕರೋನಾ ಪರೀಕ್ಷೆಯನ್ನು ನಡೆಸುವಂತೆ ಜಿಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸೂಚನೆ ನೀಡಿದರು.
ಜಿ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ೧೫ದಿನಗಳ ಕಾಲ ಪ್ರತಿದಿನ ಕನಿಷ್ಟ ೩ಸಾವಿರ ವ್ಯಕ್ತಿಗಳಿಗೆ ಕರೋನಾ ಪರೀಕ್ಷೆ ನಡೆಸಬೇಕು. ಪ್ರತಿದಿನ ೨ಸಾವಿರ ಆರ್‍ಟಿಪಿಸಿಆರ್ ಮತ್ತು ೧ಸಾವಿರ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸ ಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕರೋನಾ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾದ ತಪಾಸಣಾ ಕಿಟ್‌ಗಳನ್ನು ಪೂರೈಕೆ ಮಾಡಲಾ ಗುವುದು ಎಂದು ಅವರು ಹೇಳಿದರು.
ಸರ್ವ ಸಿದ್ಧತೆ: ಕರೋನಾ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎ ವ್ಯವಸ್ಥೆಯನ್ನು ಮಾಡಬೇಕು. ರೋಗ ಲಕ್ಷಣವಿಲ್ಲದ ಕರೋನಾ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್ ಆಸ್ಪತ್ರೆ ಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಧಿಕಾರಿ ಅವರು ತಿಳಿಸಿದರು.
ಮೆಗ್ಗಾನ್ ಪರ್ಯಾಯ ವ್ಯವಸ್ಥೆ: ಕರೋನಾ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿರಿಸಿ ಹೊರ ಗುತ್ತಿಗೆ ಸಿಬ್ಬಂದಿ ಗಳು ನಡೆಸುತ್ತ್ರಿರುವ ಪ್ರತಿಭಟನೆ ದುರದಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಡಳಿತ ತನ್ನಿಂದಾದ ಎ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ೩೫೦ಮಂದಿ ಕೊರೋನಾ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸ ಬೇಕಾದವರು ಪ್ರತಿಭಟನೆ ನಡೆಸುತ್ತಿರು ವುದು ಸರಿಯಲ್ಲ ಎಂದು ಜಿಧಿಕಾರಿ ಅವರು ತಿಳಿಸಿದರು.
ಹೊರಗುತ್ತಿಗೆ ನೌಕರರ ಸಮಸ್ಯೆ ಗಳನ್ನು ಬಗೆಹರಿಸಲು ಎ ರೀತಿಯ ಪ್ರಯತ್ನಗಳನ್ನು ಮುಂದುವರೆಸಲಾ ಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎ ಸೌಲಭ್ಯ ಗಳನ್ನು ಒದಗಿಸಲಾಗುತ್ತಿದೆ. ಕರೋನಾ ಪೀಡಿತರ ಸಂಖ್ಯೆ ಹೆಚ್ಚಳದಿಂದ ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ. ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡು ವಂತೆ ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅವರು ಮನವಿ ಮಾಡಿದರು.
ಕ್ರಿಮಿನಲ್ ಮೊಕದ್ದಮೆ: ಕರೋನಾ ಪೀಡಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುzಗಳಿಗೆ ತಕ್ಷಣ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಇಂತಹ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್ ಮೆಕದ್ದಮೆ ದಾಖಲಿಸು ವಂತೆ ಜಿಧಿಕಾರಿ ಅವರು ಶಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಧಿಕಾರಿ ಜಿ. ಅನುರಾಧ, ಜಿ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.