ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ

432

ಶಿವಮೊಗ್ಗ: ಜಿಯಲ್ಲಿ ಕರೋನಾ ಪಾಸಿಟಿವ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ಖಾತ್ರಿ ಪಡಿಸುವ ಉದ್ದೇಶದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಆರಂಭಿಸಲಾಗಿದೆ.
ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಪ್ರಾಕ್ಸಿಯಾರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆಗೆ ೧೦ವರ್ಷಗಳ ಟೆಂಡರ್ ನೀಡಲಾಗಿದ್ದು, ಶುಕ್ರವಾರದಿಂದ ಆಕ್ಸಿಜನ್ ಸರಬರಾಜು ಆರಂಭಿಸಲಾ ಗಿದೆ ಎಂದು ಶಿವಮೊಗ್ಗ ಬೋಧನಾ ಆಸ್ಪತ್ರೆಯ ನಿರ್ದೇಶಕ ಡಾ.ಸಿದ್ಧಪ್ಪ ತಿಳಿಸಿzರೆ.
ಪ್ರಸ್ತುತ ೧೩ಕೆ.ಎಲ್.ಡಿ ಸಾಮರ್ಥ್ಯದ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ಕಾರ್ಯಾರಂಭ ಮಾಡಲಾ ಗಿದ್ದು, ಆಸ್ಪತ್ರೆಯ ಬೇಡಿಕೆಯನ್ನು ಸಂಪೂರ್ಣವಾಗಿ ಪೂರೈಸಲು ಸಾಧ್ಯವಾಗಲಿದೆ. ಕರೋನಾ ಪೀಡಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಜಿಯಲ್ಲಿ ಆಕ್ಸಿಜನ್ ಲಭ್ಯತೆ ಯನ್ನು ಖಾತ್ರಿಪಡಿಸಲು ಪ್ಲಾಂಟ್ ಅಳವಡಿಸಲಾಗಿದೆ. ಕರೋನಾ ತೀವ್ರ ಗೊಂಡಂತೆ ಮೂಲ ತಯಾರಿಕಾ ಸಂಸ್ಥೆಗಳಿಂದ ಮೆಡಿಕಲ್ ಆಕ್ಸಿಜನ್ ಕೊರತೆ ಕಂಡು ಬಂದಿತ್ತು. ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ಲಭ್ಯ ವಿರುವುದರಿಂದ ಇನ್ನು ಮುಂದೆ ಆಕ್ಸಿಜನ್‌ಗೆ ಯಾವುದೇ ಕೊರತೆ ಉಂಟಾಗದು ಎಂದು ಅವರು ಹೇಳಿzರೆ.
ಆಕ್ಸಿಜನ್ ಅಗತ್ಯವಿರುವ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಹೆಚ್.ಎಫ್.ಎನ್.ಸಿ ಮತ್ತು ವೆಂಟಿಲೇಟರ್ ಉಪಕರಣಗಳನ್ನು ಬಳಸಲಾಗುತ್ತಿದೆ. ಒಬ್ಬ ವ್ಯಕ್ತಿಗೆ ೧೦ರಿಂದ ೬೦ಲೀಟರ್ ಪ್ರತಿ ನಿಮಿಷಕ್ಕೆ ಮೆಡಿಕಲ್ ಆಕ್ಸಿಜನ್ ಅವಶ್ಯಕವಿದ್ದು, ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯು ೯೫೦ಹಾಸಿಗೆ ಸಾಮಥ್ರ್ಯ ಹೊಂದಿದ್ದು, ಕರೋನಾ ಪೀಡಿತರಿಗೆ ಸಮರ್ಪಕ ಚಿಕಿತ್ಸೆಯನ್ನು ನೀಡಲಾಗು ತ್ತಿದ್ದು, ಇನ್ನು ಮುಂದೆ ಯಾರಿಗೂ ಆಕ್ಸಿಜನ್ ಕೊರತೆಯಾಗುವುದಿಲ್ಲ. ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಕೆಗೆ ಸಹಕರಿಸಿದ ಜಿ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಹಾಗೂ ಜಿಧಿಕಾರಿ ಅವರಿಗೆ ಧನ್ಯವಾದ ಸಲ್ಲಿಸಿzರೆ.